ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಅಪರಿಚಿತ ವ್ಯಕ್ತಿ: ಬಿಜೆಪಿಯ ‘ಜನೋತ್ಸವ’ ಕಾರ್ಯಕ್ರಮದ ಟೀ ಶರ್ಟ್ ಧರಿಸಿರೋ ಮೃತ ವ್ಯಕ್ತಿ

ಬೆಂಗಳೂರಿನ ಹೆಬ್ಬಾಳ ಹಳೇ ಸಂಚಾರ ಪೊಲೀಸ್ ಠಾಣೆ ಸಮೀಪ ಭದ್ರಪ್ಪ ಲೇಔಟ್ ಬಳಿ ಸುಮಾರು 35 ವರ್ಷದ ಅಪರಿಚಿತ ವ್ಯಕ್ತಿಯು ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.‌

ಮುಖದಲ್ಲಿ ಗಾಯದ ಗುರುತು, ರಕ್ತದ‌ ಕಲೆಗಳು ಕಂಡುಬಂದಿದ್ದು, ಕೊಲೆಯಾಗಿರುವ ಶಂಕೆವ್ಯಕ್ತವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮೃತನ ಹೆಸರು, ವಿಳಾಸ‌ ಸೇರಿದಂತೆ ಇತರೆ ವಿಚಾರ ನಿಖರವಾಗಿ ತಿಳಿದುಬಂದಿಲ್ಲ.

2022ರಲ್ಲಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರ ಅಧಿಕಾರದ ಮೊದಲ ವರ್ಷವನ್ನು ಆಚರಿಸಲು ದೊಡ್ಡಬಳ್ಳಾಪುರದಲ್ಲಿ ಯೋಜಿಸಿದ್ದ ‘ಜನೋತ್ಸವ’ ಕಾರ್ಯಕ್ರಮದಲ್ಲಿ ಭಾಗವಹಿಸುವ ಕಾರ್ಯಕರ್ತರಿಗೆ ತಯಾರಿಸಿದ್ದ ಟೀ ಶರ್ಟ್ ನ್ನು ಈ ಮೃತ ವ್ಯಕ್ತಿ ಧರಿಸಿದ್ದಾನೆ. ಈತನ ಸಾವು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಂತಾಗಿದೆ.

ಮೃತ ವ್ಯಕ್ತಿಯ ಬಗ್ಗೆ ಮಾಹಿತಿಯನ್ನು ಹೆಬ್ಬಾಳ ಸಂಚಾರ ಠಾಣೆಗೆ ತಿಳಿಸಲು ಕೋರಿದೆ.

9480801931

9964209326

7349287186

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….

Ramesh Babu

Journalist

Recent Posts

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

53 minutes ago

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

3 hours ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

14 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

14 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

16 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

17 hours ago