ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನನ್ನು ಇದೀಗ ಬಂಧನ ಮಾಡಲಾಗಿದೆ.
ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32), ಕುರ್ಣೆಗಾಲ ಗ್ರಾಮದ ಅಮೃತಾ(26) ಬಂಧಿತ ಆರೋಪಿಗಳು.
ಮೈಸೂರಿನ ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ಕೊಲೆ ನಡೆದಿತ್ತು. ಕುರ್ಣೇಗಾಲದ ಜವರಪ್ಪ ಕೊಲೆಯಾಗಿದ್ದ ದುರ್ದೈವಿ.
ಏ.17ರಂದು ಕುರ್ಣೇಗಾಲ ಗ್ರಾಮದ ರಸ್ತೆ ಬದಿಯಲ್ಲಿ ವ್ಯಕ್ತಿ ಶವ ಅನುಮಾನಸ್ಪ ರೀತಿಯಲ್ಲಿ ಪತ್ತೆಯಾಗಿತ್ತು. ಅನುಮಾನಸ್ಪದ ರೀತಿಯಲ್ಲಿ ಶವ ಪತ್ತೆಯಾಗಿದ್ದರಿಂದ ತನಿಖೆ ನಡೆಸುವಂತೆ ದೂರು ದಾಖಲಾಗಿತ್ತು.
ತನಿಖೆ ವೇಳೆ ಪತ್ನಿಯ ಅಕ್ರಮ ಸಂಬಂಧಕ್ಕೆ ಪತಿ ಕೊಲೆಯಾಗಿರುವುದು ಕಂಡುಬಂದಿದೆ. ದೂರು ದಾಖಲಾದ 24 ಗಂಟೆಯೊಳಗೆ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿ ಸಿದ್ದೇಶ್, ಮೃತನ ಪತ್ನಿ ಅಮೃತಾ ಜತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದು, ಗಂಡ ಇದ್ದರೆ ತಮ್ಮ ಸಂಬಂಧಕ್ಕೆ ಅಡ್ಡಿ ಅಂತಾ ಆರೋಪಿಗಳು ಕೊಲೆ ಪ್ಲಾನ್ ಮಾಡಿದ್ದರು.
ಅಮೃತಾ ಕುಮ್ಮಕ್ಕಿನಿಂದ ಪ್ರಿಯಕರನಿಂದ ಜವರಪ್ಪನ ಕೊಲೆಯಾಗಿದೆ. ಪೊಲೀಸರ ತನಿಖೆಯಲ್ಲಿ ಘಟನೆ ಬೆಳಕಿಗೆ ಬಂದಿದೆ.
ಕುರ್ಣೇಗಾಲ ಗ್ರಾಮದ ಜವರಪ್ಪ ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮದ ಅಮೃತಾಳನ್ನ ವಿವಾಹವಾಗಿದ್ದ. ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಸಣ್ಣಪುಟ್ಟ ವಿಚಾರಕ್ಕೆ ಗಂಡ ಹೆಂಡತಿ ನಡುವೆ ಆಗಾಗ್ಗೆ ಗಲಾಟೆ ಆಗುತ್ತಿತ್ತು.
12 ದಿನಗಳ ಹಿಂದೆ ಮಕ್ಕಳೊಂದಿಗೆ ಹಬ್ಬಕ್ಕೆಂದು ತವರಿಗೆ ಹೋಗಿದ್ದ ಅಮೃತಾ, ಏ.16ರಂದು ಹೆಂಡತಿ ಮನೆಗೆ ಹೋಗಿ ಬರುತ್ತೇನೆಂದು ಹೋಗಿದ್ದ ಜವರಪ್ಪ, ಆದರೆ ಮನೆಗೆ ವಾಪಸ್ ಆಗಿರಲಿಲ್ಲ. ಮಾರನೇ ದಿನ ಬೆಳಗ್ಗೆ 6.30ಕ್ಕೆ ಗ್ರಾಮದ ಸಮೀಪದ ರಸ್ತೆ ಬದಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಯಾರೋ ಕೊಲೆ ಮಾಡಿದ್ದಾರೆಂದು ದೂರು ದಾಖಲು ಮಾಡಿದ್ದ ಜವರಪ್ಪ ಸಹೋದರ ರವಿ.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…