ಕೋಲಾರ: ಅನೈತಿಕ ಮತ್ತು ಹಣಕಾಸು ಭ್ರಷ್ಟಾಚಾರದ ಆರೋಪದ ಮೇಲೆ ಕಳೆದ ವರ್ಷವೇ ವಾಸುದೇವರೆಡ್ಡಿ ಅವರನ್ನು ರಾಜ್ಯ ಕಾರ್ಯದರ್ಶಿಯಿಂದ ಉಚ್ಚಾಟನೆ ಮಾಡಲಾಗಿದ್ದು, ಕಾರ್ಯಕರ್ತರು ಹಾಗೂ ಹಿತೈಷಿಗಳು ಗೊಂದಲಗೊಳ್ಳದೇ ಎಚ್ಚರ ವಹಿಸಬೇಕು ಎಂದು ಎಸ್ಎಫ್ಐ ರಾಜ್ಯ ಅಧ್ಯಕ್ಷ ಅಮರೇಶ್ ಕಡಗದ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಾಸುದೇವರೆಡ್ಡಿ ಮೇಲೆ ಆರೋಪಗಳು ಕೇಳಿ ಬಂದ ತಕ್ಷಣವೇ ಅವರನ್ನು ಎಸ್ಎಫ್ಐ ಸಂಘಟನೆಯಿಂದ ಕೈ ಬಿಟ್ಟು ಅವರ ವಿರುದ್ದ ಸಂಘಟನೆಯ ಆಂತರಿಕ ತನಿಖೆಯಿಂದ ಸಹ ದೃಢವಾಗಿದೆ ಎಸ್ಎಫ್ಐ ಸಂಘಟನೆಯ ಹಿತೈಷಿಗಳು ಹಾಗೂ ಕಾರ್ಯಕರ್ತರಲ್ಲಿ ಗೊಂದಲ ಹುಟ್ಟು ಮಾಡಿ ಅವರನ್ನು ದಾರಿ ತಪ್ಪಿಸಲು ಹೊರಟಿದ್ದಾರೆ ಯಾವುದೇ ಕಾರಣಕ್ಕೂ ವಾಸುದೇವರೆಡ್ಡಿ ಅವರ ವಿಚಾರದಲ್ಲೂ ಯಾರು ಬೆಂಬಲಿಸಬಾರದು ಎಂದರು.
ವಾಸುದೇವರೆಡ್ಡಿ ಅವರು ಸಂಘಟನೆಯಲ್ಲಿ ಇದ್ದಷ್ಟು ದಿನವು ಸಂಘಟನೆಯ ನಿಲುವುಗಳಿಗೆ ವಿರುದ್ದವಾಗಿಯೇ ಇದ್ದರು ಸಂಘಟನೆಯಿಂದ ಕೈ ಬಿಟ್ಟ ನಂತರ ಅವರು ಕಾಂಗ್ರೆಸ್ ಪಕ್ಷದ ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಎಸ್ಎಫ್ಐ ಸಂಘಟನೆಯ ಯುವಜನರ ಸಂಪರ್ಕ ಬಳಸಿಕೊಳ್ಳಲು ಹೊರಟಿದ್ದಾರೆ ಅವರಿಗೂ ಎಸ್ಎಫ್ಐ ಸಂಘಟನೆಗೂ ಯಾವುದೇ ಸಂಬಂಧವಿಲ್ಲ ಅವರನ್ನು ಯಾವುದೇ ಕಾರಣಕ್ಕೂ ಬೆಂಬಲಿಸಬಾರದು ಎಂದು ಮನವಿ ಮಾಡಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಎಸ್ಎಫ್ಐ ರಾಜ್ಯ ಕಾರ್ಯದರ್ಶಿ ಭೀಮನಗೌಡ, ಜಿಲ್ಲಾ ಅಧ್ಯಕ್ಷ ಅಂಬ್ಲಿಕಲ್ ಎನ್ ಶಿವಪ್ಪ, ಜಿಲ್ಲಾ ಮುಖಂಡ ಶಶಿಕುಮಾರ್ ಇದ್ದರು.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…