ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ, ವಯೋವೃದ್ಧರಿಗೆ ಹೊದಿಕೆ ಹಾಗೂ ವಸ್ತ್ರವಿತರಣೆ ಜೊತೆಗೆ ನಿರಾಶ್ರಿತ ಕಡುಬಡವರಿಗೆ ಅನ್ನದಾಸೋಹ ಮಾಡುವ ಮೂಲಕ ಅಭಿಮಾನಿಗಳು ಅರ್ಥಪೂರ್ಣವಾಗಿ ಆಚರಿಸಿದರು.

ತಾಲ್ಲೂಕಿನ ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿರಂತರ ಅನ್ನದಾಸೋಹ ಸಮಿತಿಯ ಸಹಯೋಗದೊಂದಿಗೆ ತಮ್ಮ ನೆಚ್ಚಿನ ನಾಯಕರ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು

ಈ ವೇಳೆ ಕಾರ್ಯಕ್ರಮದಲ್ಲಿ ದಾನಿಗಳಾದ ಬಿಡಿಗೆರೆ ರವಿಕುಮಾರ್ ಮಾತನಾಡಿ 2319 ದಿನಗಳಿಂದ ನಿರಂತರವಾಗಿ ಆಹಾರ ವಿತರಣೆ ಮಾಡುವ ಮೂಲಕ ಹಸಿವು ನೀಗಿಸುವ ಕಾರ್ಯವನ್ನು ನಿಸ್ವಾರ್ಥ ಮನೋಭಾವದಿಂದ ಮಲ್ಲೇಶ್ ಮಾಡುತ್ತಿದ್ದು, ಇಂದು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬದ ಅಂಗವಾಗಿ ಹಸಿದವರಿಗೆ ಆಹಾರ ವಿತರಣೆ, ವಯೋವೃದ್ದರಿಗೆ ಹೊದಿಕೆ ಹಾಗೂ ವಸ್ತ್ರ ವಿತರಣೆ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ ಮಾಡುವ ಮೂಲಕ ಆಚರಿಸಿದ್ದೇವೆ. ನೂರಾರು ಯುವಕರಿಗೆ ಮಾದರಿಯಾಗಿರುವ ಗಂಟಿಗಾನಹಳ್ಳಿ ಸಂದೀಪ್ ಅವರ ಸೇವಾ ಕಾರ್ಯಗಳಿಂದಲೇ ಚಿರಪರಿಚಿತರು ಅವರ ಸೇವೆ ಸಮಾಜಕ್ಕೆ ಮತ್ತಷ್ಟು ಲಭಿಸಲಿ ಎಂದು ಶುಭ ಹಾರೈಸುತ್ತೇವೆ ಎಂದರು.

ಮುಖಂಡರಾದ ರಾಜಘಟ್ಟ ಹರೀಶ್ ಮಾತನಾಡಿ, ನಿರಂತರ ಅನ್ನದಾಸೋಹ ಸಮಿತಿಯ ಜೊತೆಗೂಡಿ ಅಭಿಮಾನಿಗಳೆಲ್ಲರೂ ಒಟ್ಟಾಗಿ ಸಂದೀಪ್ ಅವರ ಹುಟ್ಟು ಹಬ್ಬ ಆಚರಿಸುತ್ತಿರುವುದು ಸಂತಸ ತಂದಿದೆ. ಇಂದು ನೂರಾರು ವಯೋವೃದ್ಧರು, ನಿರಾಶ್ರಿತರು, ಮಕ್ಕಳ ಅಗತ್ಯತೆ ಪೂರೈಸುವ ಮೂಲಕ ಸಂಭ್ರಮಿಸುತ್ತಿರುವುದು ಅರ್ಥಪೂರ್ಣವಾಗಿದೆ ಇದಲ್ಲದೆ ದೊಡ್ಡಬಳ್ಳಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ಸಮಾಜ ಸೇವಕ ಸಂದೀಪ್ ರವರು ಹುಟ್ಟು ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ ಎಂದರು.

ಈ ವೇಳೆ ಬಿಡಿಗೆರೆ ರವಿಕುಮಾರ್, ಗಂಡರಾಜಾಪುರ ಅರುಣ್, ರಾಜಘಟ್ಟ ಹರೀಶ್, ಅನ್ನದಾಸೋಹಿ ಮಲ್ಲೇಶ್, ಸಮಾಜಸೇವಕರಾದ ಸೇಲ್ವಮ್, ಯೋಗ ಕೃಷ್ಣಪ್ಪ, ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

13 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

15 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

18 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

20 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

22 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

2 days ago