ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದರು.
ಸುವರ್ಣಸೌಧದದ ವಿಧಾನ ಪರಿಷತ್ ನಲ್ಲಿ ಸದಸ್ಯ ಸಿ. ಟಿ. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಸಚಿವರು ಮಾತನಾಡಿದರು. ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂದಿಸಿದಂತೆ ಒಟ್ಟು 29603.15 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದು, 314 ವಾಹನಗಳನ್ನು ವಶಪಡಿಸಿಕೊಳ್ಳ ಲಾಗಿದೆ ಎಂದರು.
ಯಾದಗಿರಿ ಜಿಲ್ಲೆಯಲ್ಲಿ ಆಹಾರ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅನ್ಯ ಇಲಾಖೆಯ ಅಧಿಕಾರಿಗಳನ್ನು ಇಲಾಖೆ ಕರ್ತ್ಯವ್ಯದಿಂದ ಬಿಡುಗಡೆಗೊಳಿಸಲಾಗಿದೆ ಹಾಗೂ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಕೆ.ಎಫ್.ಸಿ.ಎಸ್.ಸಿ. ಗೋದಾಮು ಅಮಾನತ್ತುಗೊಳಿಸಲಾಗಿರುತ್ತದೆ.
ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಣೆ ಮತ್ತು ಮಾರಾಟಕ್ಕೆ ಕಡಿವಾಣ ಹಾಕಲು ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಯನಿರ್ವಹಕ ಸಿಬ್ಬಂದಿಗಳಿಗೆ ಕಾಲ ಕಾಲಕ್ಕೆ ಮೇಲ್ವಿಚಾರಣೆ ಮಾಡುವಂತೆ ನಿರ್ದೇಶನ ನೀಡಿ ಅಗತ್ಯ ವಸ್ತುಗಳ ಕಾಯ್ದೆ 1955 ರಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ.
ಪಡಿತರ ಚೀಟಿದಾರರು ಪಡಿತರ ಅಕ್ಕಿಯನ್ನು ದುರ್ಬಳಕೆ ಮಾಡಿಕೊಂಡ ಪ್ರಕರಣಗಳು ಕಂಡುಬಂದಲ್ಲಿ ಸದರಿ ಪಡಿತರ ಚೀಟಿಗಳನ್ನು ರದ್ದುಪಡಿಸಿ ಅಂತವರ ವಿರುದ್ಧ ನಿಯಾಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿದೆ ಎಂದು ಪರಿಷತ್ ನಲ್ಲಿ ತಿಳಿಸಿದ ಸಚಿವ ಮುನಿಯಪ್ಪ ಅವರು ನ್ಯಾಯಬೆಲೆ ಅಂಗಡಿ, ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಜಾಗೃತಿ ಸಮಿತಿಗಳನ್ನು ರಚಿಸಿ ಪಡಿತರ ವಿತರಣೆಯನ್ನು ಪರಿಶೀಲಿಸಲಾಗುತ್ತಿದೆ ಎಂದರು.
ಪ್ರತಿ ಮಾಹೆ ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿ ಆಹಾರ ಅದಾಲತ್ಗಳನ್ನು ನಡೆಸಿ ಪಡಿತರ ಚೀಟಿದಾರರಿಗೆ ಪಡಿತರ ವಿತರಣೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ರಾಜ್ಯ ಮಟ್ಟದಲ್ಲಿ ಆಹಾರ ಜಾಗೃತ ದಳ ರಚಿಸಿ ಅಕ್ರಮಗಳ ಬಗ್ಗೆ ನಿಯಮಾನುಸಾರ ಕ್ರಮವಹಿಸಲಾಗುತ್ತಿದೆ ಎಂದರು.
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…