ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ವಿತರಿಸುವ ಸರ್ಕಾರಿ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿತರನ್ನು ಶಿರಸಿ ನಗರ ಪೊಲೀಸರ ಕಾರ್ಯಚರಣೆ ನಡೆಸಿ ಬಂಧನ ಮಾಡಲಾಗಿದೆ.
ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 40 ಕ್ವಿಂಟಾಲ್ ಅಕ್ಕಿ ಹಾಗೂ ಸಾಗಾಟಕ್ಕೆ ಬಳಸಿದ್ದ ವಾಹನವನ್ನು ಜಪ್ತಿ ಮಾಡಲಾಗಿದೆ.
ಶಿರಸಿಯ ಚಿಪಗಿ ನರೆಬೈಲ್ ನಿವಾಸಿ ಉಬೇದ್ ಅಲಿಯಾಸ್ ಸಲೀಂ ಜವಳಿ ಎಂಬಾತ ಪಡಿತರ ಚೀಟಿದಾರರಿಂದ ಕಡಿಮೆ ಬೆಲೆಗೆ ಅನ್ನಭಾಗ್ಯ ಯೋಜನೆಯ 40 ಕ್ವಿಂಟಾಲ್ ಅಕ್ಕಿಯನ್ನು ಖರೀದಿಸಿ, ತನ್ನ ಹಿಟ್ಟಿನ ಗಿರಣಿಯಲ್ಲಿ ಸಂಗ್ರಹಿಸಿಟ್ಟಿದ್ದನು. ಈ ಅಕ್ಕಿಯನ್ನು ಇಸಳೂರು, ಶಿರಸಿ ನಿವಾಸಿ ಸುನೀಲ್ ಮಹಾದೇವಪ್ಪ ನಾಡಗಿ ಎಂಬಾತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಖರೀದಿಸಿದ್ದನು.
ಶಿರಸಿಯಿಂದ ಹುಬ್ಬಳ್ಳಿ ಕಡೆಗೆ ಟಾಟಾ ಕಂಪನಿಯ 407 ವಾಹನದಲ್ಲಿ ಈ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಿಕೊಂಡು ಹೋಗುತ್ತಿದ್ದಾಗ, ಶಿರಸಿಯ ಮಂಗಳೂರು ಹೋಟೆಲ್ ಕ್ರಾಸ್ ಬಳಿ ಪೊಲೀಸರು ವಾಹನ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಸುನೀಲ್ ಮಹಾದೇವಪ್ಪ ನಾಡಗಿ (ಈಸಳೂರು, ಶಿರಸಿ) ಮತ್ತು ಅಲ್ತಾಫ್ ರೆಹಮತ್ ಉಲ್ಲಾ ಶೇಖ್ (ಕಸ್ತೂರ ಬಾ ನಗರ, ಶಿರಸಿ) ಎಂಬುವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು ₹1,36,000 ಬೆಲೆ ಬಾಳುವ 40 ಕ್ವಿಂಟಾಲ್ (50 ಕೆ.ಜಿ. ತೂಕದ 80 ಚೀಲ) ಪಡಿತರ ಅಕ್ಕಿ ಹಾಗೂ ಅಕ್ರಮ ಸಾಗಾಟಕ್ಕೆ ಬಳಸಿದ್ದ ಅಂದಾಜು ₹4,50,000 ಮೌಲ್ಯದ ಟಾಟಾ 407 ವಾಹನವನ್ನು ಜಪ್ತಿ ಮಾಡಲಾಗಿದೆ. ಒಟ್ಟು ₹5,86,000 ಮೌಲ್ಯದ ಸ್ವತ್ತನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೃಷ್ಣಮೂರ್ತಿ, ಜಗದೀಶ್ ನಾಯ್ಕ್ ಹಾಗೂ ಶಿರಸಿ ಉಪವಿಭಾಗದ ಡಿವೈಎಸ್‌ಪಿ ಗೀತಾ ಪಾಟೀಲ್, ವೃತ್ತ ನಿರೀಕ್ಷಕ ಶಶಿಕಾಂತ ವರ್ಮಾ, ಶಿರಸಿ ತಹಶೀಲ್ದಾರ್ ಪುಟ್ಟರಾಜಗೌಡ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆಯಲ್ಲಿ ಶಿರಸಿ ನಗರ ಠಾಣೆಯ ಪಿಎಸ್‌ಐ ನಾಗಪ್ಪ ಬಿ, ಆಹಾರ ನಿರೀಕ್ಷಕರಾದ ಕವಿತಾ ಪಾಟನಕರ್, ಸಿಬ್ಬಂದಿ ಸದ್ದಾಂ ಹುಸೇನ್, ಚನ್ನಬಸಪ್ಪ ಕ್ಯಾರಕಟ್ಟಿ, ಹನುಮಂತ ಕಬಾಡಿ, ಸುದರ್ಶನ ನಾಯ್ಕ, ಸುನೀಲ್ ಹಂಡಲಗಿ, ರಾಜಶೇಖರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…