ಅನ್ನಭಾಗ್ಯ ಪಡಿತರ ಅಕ್ಕಿ ಅಕ್ರಮ ಸಾಗಾಟ,‌ ಮಾರಾಟ: 40 ಕ್ವಿಂಟಾಲ್ ಅಕ್ಕಿ ಹಾಗೂ ಸಾಗಾಟಕ್ಕೆ ಬಳಸಿದ್ದ ವಾಹನ ಜಪ್ತಿ

ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ವಿತರಿಸುವ ಸರ್ಕಾರಿ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿತರನ್ನು ಶಿರಸಿ ನಗರ ಪೊಲೀಸರ ಕಾರ್ಯಚರಣೆ ನಡೆಸಿ ಬಂಧನ ಮಾಡಲಾಗಿದೆ.

ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 40 ಕ್ವಿಂಟಾಲ್ ಅಕ್ಕಿ ಹಾಗೂ ಸಾಗಾಟಕ್ಕೆ ಬಳಸಿದ್ದ ವಾಹನವನ್ನು ಜಪ್ತಿ ಮಾಡಲಾಗಿದೆ.

ಶಿರಸಿಯ ಚಿಪಗಿ ನರೆಬೈಲ್ ನಿವಾಸಿ ಉಬೇದ್ ಅಲಿಯಾಸ್ ಸಲೀಂ ಜವಳಿ ಎಂಬಾತ ಪಡಿತರ ಚೀಟಿದಾರರಿಂದ ಕಡಿಮೆ ಬೆಲೆಗೆ ಅನ್ನಭಾಗ್ಯ ಯೋಜನೆಯ 40 ಕ್ವಿಂಟಾಲ್ ಅಕ್ಕಿಯನ್ನು ಖರೀದಿಸಿ, ತನ್ನ ಹಿಟ್ಟಿನ ಗಿರಣಿಯಲ್ಲಿ ಸಂಗ್ರಹಿಸಿಟ್ಟಿದ್ದನು. ಈ ಅಕ್ಕಿಯನ್ನು ಇಸಳೂರು, ಶಿರಸಿ ನಿವಾಸಿ ಸುನೀಲ್ ಮಹಾದೇವಪ್ಪ ನಾಡಗಿ ಎಂಬಾತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಖರೀದಿಸಿದ್ದನು.

ಶಿರಸಿಯಿಂದ ಹುಬ್ಬಳ್ಳಿ ಕಡೆಗೆ ಟಾಟಾ ಕಂಪನಿಯ 407 ವಾಹನದಲ್ಲಿ ಈ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಿಕೊಂಡು ಹೋಗುತ್ತಿದ್ದಾಗ, ಶಿರಸಿಯ ಮಂಗಳೂರು ಹೋಟೆಲ್ ಕ್ರಾಸ್ ಬಳಿ ಪೊಲೀಸರು ವಾಹನ ಸಮೇತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಸುನೀಲ್ ಮಹಾದೇವಪ್ಪ ನಾಡಗಿ (ಈಸಳೂರು, ಶಿರಸಿ) ಮತ್ತು ಅಲ್ತಾಫ್ ರೆಹಮತ್ ಉಲ್ಲಾ ಶೇಖ್ (ಕಸ್ತೂರ ಬಾ ನಗರ, ಶಿರಸಿ) ಎಂಬುವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು ₹1,36,000 ಬೆಲೆ ಬಾಳುವ 40 ಕ್ವಿಂಟಾಲ್ (50 ಕೆ.ಜಿ. ತೂಕದ 80 ಚೀಲ) ಪಡಿತರ ಅಕ್ಕಿ ಹಾಗೂ ಅಕ್ರಮ ಸಾಗಾಟಕ್ಕೆ ಬಳಸಿದ್ದ ಅಂದಾಜು ₹4,50,000 ಮೌಲ್ಯದ ಟಾಟಾ 407 ವಾಹನವನ್ನು ಜಪ್ತಿ ಮಾಡಲಾಗಿದೆ. ಒಟ್ಟು ₹5,86,000 ಮೌಲ್ಯದ ಸ್ವತ್ತನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಶಿರಸಿ ನಗರ  ಠಾಣೆಯಲ್ಲಿ  ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೃಷ್ಣಮೂರ್ತಿ, ಜಗದೀಶ್ ನಾಯ್ಕ್ ಹಾಗೂ ಶಿರಸಿ ಉಪವಿಭಾಗದ ಡಿವೈಎಸ್‌ಪಿ ಗೀತಾ ಪಾಟೀಲ್, ವೃತ್ತ ನಿರೀಕ್ಷಕ ಶಶಿಕಾಂತ ವರ್ಮಾ, ಶಿರಸಿ ತಹಶೀಲ್ದಾರ್  ಪುಟ್ಟರಾಜಗೌಡ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆಯಲ್ಲಿ ಶಿರಸಿ ನಗರ ಠಾಣೆಯ ಪಿಎಸ್‌ಐ ನಾಗಪ್ಪ ಬಿ, ಆಹಾರ ನಿರೀಕ್ಷಕರಾದ ಕವಿತಾ ಪಾಟನಕರ್, ಸಿಬ್ಬಂದಿ ಸದ್ದಾಂ ಹುಸೇನ್, ಚನ್ನಬಸಪ್ಪ ಕ್ಯಾರಕಟ್ಟಿ, ಹನುಮಂತ ಕಬಾಡಿ, ಸುದರ್ಶನ ನಾಯ್ಕ, ಸುನೀಲ್ ಹಂಡಲಗಿ, ರಾಜಶೇಖರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

24 minutes ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

3 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

6 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

18 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

21 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

24 hours ago