ಅನ್ನಭಾಗ್ಯ ಯೋಜನೆಯಡಿ 1.28 ಕೋಟಿ ಪಡಿತರ ಕುಟುಂಬಗಳಿಗೆ ನೇರ ನಗದು ವರ್ಗಾವಣೆಗೆ ಇಂದು ಸಂಜೆ 5ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಅನ್ನಭಾಗ್ಯ ಯೋಜನೆಯು ಕಾಂಗ್ರೆಸ್ ಸರ್ಕಾರದ 3ನೇ ಗ್ಯಾರಂಟಿ ಯೋಜನೆಯಾಗಿದೆ. ಈ ಯೋಜನೆ ಫಲಾನುಭವಿಗಳ ಅಕೌಂಟ್‌ಗೆ 170 ರೂಪಾಯಿ ಹಣ ಜಮಾವಣೆ ಮಾಡಲಿರುವ ಸರ್ಕಾರ.
ಸರ್ಕಾರ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ನೀಡುವ ಭರವಸೆ ನೀಡಿತ್ತು. ಇದರಲ್ಲಿ 5 ಕಿಲೋ ಅಕ್ಕಿಯನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಉಳಿದ 5 ಕಿಲೋ ಅಕ್ಕಿ ಲಭ್ಯವಿಲ್ಲದ ಕಾರಣ ಅಕ್ಕಿ ಬದಲಿಗೆ 1 ಕೆಜಿಗೆ 34 ರೂ. ನಂತೆ 5 ಕೆಜಿ ಅಕ್ಕಿಗೆ 170 ರೂ. ನೀಡಲು ಸರ್ಕಾರ ನಿರ್ಧರಿಸಿದೆ. ಈ ಯೋಜನೆಗೆ ಬಜೆಟ್‌ನಲ್ಲೂ ತಿಂಗಳಿಗೆ 856.25 ಕೋಟಿ ರೂ.ನಂತೆ 10,275 ಕೋಟಿ ರೂ. ಹಣವನ್ನು ಸಿಎಂ ಸಿದ್ದರಾಮಯ್ಯ ಮೀಸಲಿಟ್ಟಿದ್ದಾರೆ.
ರಾಜ್ಯದಲ್ಲಿ ಸುಮಾರು 1.29 ಕೋಟಿ ಬಿಪಿಎಲ್ ಕಾರ್ಡ್‌ಗಳು ಬಳಕೆಯಲ್ಲಿವೆ. ಬಿಪಿಎಲ್ ಕಾರ್ಡ್ ಆಧಾರದಲ್ಲಿ 4.41 ಕೋಟಿ ಫಲಾನುಭವಿಗಳು ಈ ಯೋಜನೆಯನ್ನು ಅವಲಂಬಿಸಿದ್ದಾರೆ.