ರಾಜ್ಯ ಸರ್ಕಾರದ ಅನ್ನ ಭಾಗ್ಯ ಯೋಜನೆಗೆ ಅಕ್ಕಿ ವಿತರಿಸದ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಮುಖಂಡರು ಹಾಗೂ ಕಾರ್ಯಕರ್ತರು ಬೀರಸಂದ್ರದ ಜಿಲ್ಲಾಡಳಿತ ಭವನದ ಮುಂಭಾಗ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಮಳೆಯನ್ನೂ ಲೆಕ್ಕಿಸದೇ ಪ್ರತಿಭಟನೆಗಿಳಿದ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಹಾಗೂ ಎಂಎಲ್ ಸಿ ರವಿ ಹಾಗೂ ಇತರರು.
ರಾಜ್ಯ ಸರ್ಕಾರ ಜುಲೈ ತಿಂಗಳಿಂದ ಅನ್ನ ಭಾಗ್ಯ ಯೋಜನೆಯನ್ನು ಜಾರಿಗೊಳಿಸಲು ತೀರ್ಮಾನಿಸಿದ್ದು, ಪಾರದರ್ಶಕ ವ್ಯವಸ್ಥೆಯಲ್ಲಿ ಖರೀದಿಗೆ ಎಫ್‌ಸಿಐಯನ್ನು ಕೇಳಲಾಗಿತ್ತು. ಕೇಂದ್ರದ ಬಳಿ 7 ಲಕ್ಷ ಮೆಟ್ರಿಕ್ ಟನ್ ದಾಸ್ತಾನಿದ್ದು, ಅಕ್ಕಿ ನೀಡಲು ನಿರಾಕರಿಸಿದೆ ಎಂದು ಕಿಡಿಕಾರಿದರು.