ಅಪಘಾತ ಪರಿಹಾರ ಮೊತ್ತ ಹೆಚ್ಚಿಸಿದ ಕೆಎಸ್ಆರ್ ಟಿಸಿ: ಪರಿಹಾರ ಮೊತ್ತದ ಮಾಹಿತಿ ಇಲ್ಲಿದೆ…

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC)ದ ಬಸ್ಸುಗಳು ಅಪಘಾತಕ್ಕೀಡಾದಾಗ, ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ದುರದೃಷ್ಟವಶಾತ್ ಮೃತಪಟ್ಟಲ್ಲಿ ಮೃತ ಪ್ರಯಾಣಿಕರ ಅವಲಂವಿತರಿಗೆ ಹೆಚ್ಚಿನ ಆರ್ಥಿಕ ಸದುದ್ದೇಶದಿಂದ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ವತಿಯಿಂದ ಪ್ರಸ್ತುತ ನೀಡಲಾಗುತ್ತಿರುವ ಆರ್ಥಿಕ ಪರಿಹಾರ ಮೊತ್ತವನ್ನು 3 ಲಕ್ಷದಿಂದ 10ಲಕ್ಷಗಳಿಗೆ 2024ರ ಜನವರಿ 1ರಿಂದ ಜಾರಿಗೆ ಬರುವಂತೆ ಹೆಚ್ಚಿಸಲಾಗಿದೆ.

ಮೃತರ ಕುಟುಂಬಕ್ಕೆ ಹೆಚ್ಚುವರಿ ಪರಿಹಾರ ಮೊತ್ತವನ್ನ ನೀಡುವ ಸಲುವಾಗಿ ರೂ.50 ರಿಂದ 99ರವರೆಗಿನ ಮುಖ‌ಬೆಲೆಯ ಟಿಕೆಟ್ ಪಡೆದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ ತಲಾ 1ರೂ. ಮತ್ತು 100ರೂ. ಹಾಗೂ ಹೆಚ್ಚಿನ ಬೆಲೆಯ ಟಿಕೆಟ್ ಪಡೆದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವವರ ಪ್ರಯಾಣಿಕರಿಂದ ತಲಾ 2ರೂ. ರಂತೆ ಅಪಘಾತ ಪರಿಹಾರ ನಿಧಿ ವಂತಿಕೆ ಸಂಗ್ರಹಣೆಯನ್ನೂ ಸಹ ಪಡೆದುಕೊಳ್ಳಲಾಗುವುದು.

ರೂ. 1ರಿಂದ 49ರವರೆಗಿನ ಮುಖ ಬೆಲೆಯ ಟಿಕೆಟ್ ಪಡೆದು ಪ್ರಯಾಣಿಸುವವರ ಪ್ರಯಾಣಿಕರಿಗೆ ಯಾವುದೇ ಅಪಘಾತ ಪರಿಹಾರ ನಿಧಿ ವಂತಿಕೆ ಇರುವುದಿಲ್ಲ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *