ಅಪರಾಧಿಗಳಿಗೆ ಭಯದ ವಾತಾವರಣ: ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸುವುದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯ- ಸಿಎಂ‌ ಸಿದ್ದರಾಮಯ್ಯ

ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸುವುದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜ್ಯದ ಜನಸಂಖ್ಯೆ 7 ಕೋಟಿ ದಾಟಿ ಹೋಗುತ್ತಿದೆ. ಇವರೆಲ್ಲರ ರಕ್ಷಣೆ, ಆಸ್ತಿ ಪಾಸ್ತಿ, ಮಾನ, ಪ್ರಾಣ ರಕ್ಷಿಸಿ ನೆಮ್ಮದಿಯ ಬದುಕಿಗೆ ಸುರಕ್ಷಿತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಇದಕ್ಕಾಗಿ ಇಲಾಖೆಗೆ ಅಗತ್ಯವಾದ ಸವಲತ್ತು ಮತ್ತು ನೂತನ ಠಾಣೆಗಳನ್ನು ಒದಗಿಸಲು ಸರ್ಕಾರ ಸದಾ ಸಿದ್ಧವಿದೆ ಎಂದರು.

ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದ್ದಾಗ ಅಭಿವೃದ್ಧಿಯ ವೇಗ ಹೆಚ್ಚುತ್ತದೆ. ಹೀಗಾಗಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿ ಠಾಣೆಗೆ ಬರುವವರನ್ನು ಆರೋಗ್ಯಕರವಾಗಿ ನಡೆಸಿಕೊಳ್ಳಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗುತ್ತಿರುವುದು ನೆಮ್ಮದಿಯ ಸಂಗತಿ. ಆದರೆ ಪೊಲೀಸರು ಚಾಪೆ ಕೆಳಗೆ ತೂರಿದರೆ ಅಪರಾಧಿಗಳು ರಂಗೋಲಿ ಕೆಳಗೆ ತೂರಿ, ಕಾನೂನಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಾರೆ. ಇದಕ್ಕೆ ಅವಕಾಶ ಆಗಬಾರದು ಎಂದು ತಿಳಿಸಿದರು.

ಜನರಿಗೆ ಉದ್ಯೋಗ ಇಲ್ಲದಿರುವುದು, ಬದುಕಿಗೆ ಅವಕಾಶ ಇಲ್ಲದಿರುವಾಗ ಅಪರಾಧ ಜಗತ್ತಿನ ಕಡೆಗೆ ಆಕರ್ಷಿತರಾಗುತ್ತಾರೆ. ನಗರದಲ್ಲಿ ರಿಯಲ್ ಎಸ್ಟೇಟ್ ದಂಧೆ ಕಾರಣದಿಂದ ಅಪರಾಧಗಳು ಹೆಚ್ಚಾಗುತ್ತಿವೆ. ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ. ಯಾವುದೇ ಕಾರಣಕ್ಕೂ ಅಕ್ರಮ ರಿಯಲ್ ಎಸ್ಟೇಟ್ ಗೆ ಬೆಂಬಲ ನೀಡುಬಾರದು. ಬೆಂಬಲ ಕೊಡುವ ಕೆಲಸ ಮಾಡಿದರೆ ಸರ್ಕಾರ ಸಹಿಸಲ್ಲ ಎಂದರು.

ಪೇದೆಗಳು, ಎಸ್.ಐ ಗಳು, ಇನ್ಸ್‌ಪೆಕ್ಟರ್‌ಗಳೇ ಹೆಚ್ಚೆಚ್ಚು ಕೆಲಸ ಮಾಡುತ್ತಾರೆ. ಇವರ ಯೋಗಕ್ಷೇಮ ಕೂಡ ನಮ್ಮ ಜವಾಬ್ದಾರಿ. ಪೊಲೀಸ್ ಸಿಬ್ಬಂದಿಯ ಗೃಹ ಯೋಜನೆಯನ್ನು ಸರ್ಕಾರ ಮುಂದುವರೆಸುತ್ತದೆ ಎಂದು ಹೇಳಿದರು.

Ramesh Babu

Journalist

Recent Posts

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

9 minutes ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

33 minutes ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

2 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

8 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

22 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago