ಅಪ್ಪಯ್ಯಣ್ಣ ಸೇವೆ ಅವಿಸ್ಮರಣೀಯ- ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಸಾಮಾಜಿಕ ನ್ಯಾಯದ ಪರವಾಗಿ ರಾಜಕೀಯ ಹೋರಾಟ ನಡೆಸಿ, ಸಹಕಾರ ಹಾಗೂ ಸಾರ್ವಜನಿಕ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ದಿವಂಗತ ಹಾಡೋನಹಳ್ಳಿ ಎಚ್. ಅಪ್ಪಯ್ಯಣ್ಣ ಅವರ ನಿಧನವು ನನ್ನಂತಹವರ ಅಪಾರ ಅಭಿಮಾನಿ ಬಳಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.

ತಾಲೂಕಿನ ಹಾಡೋನಹಳ್ಳಿ ಚೌಡೇಶ್ವರಿ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ ದಿವಂಗತ ಅಪ್ಪಯ್ಯಣ್ಣ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಪ್ಪಯ್ಯಣ್ಣ ಅವರ ಜೀವನ ಶೈಲಿ ಹಾಗೂ ಸೇವಾ ಮನೋಭಾವ ಇಂದಿನ ರಾಜಕೀಯಕ್ಕೆ ಮಾದರಿಯಾಗಬೇಕಾದದ್ದು ಎಂದು ಅಭಿಪ್ರಾಯಪಟ್ಟರು.

ಒಂದು ವರ್ಷದ ಹಿಂದೆ ಅವರ ನಿಧನದ ಸುದ್ದಿ ತಿಳಿದಾಗ ನಂಬಲಾಗದೆ ಹೋಯಿತು. ಇದು ತಪ್ಪು ಮಾಹಿತಿ ಇರಬಹುದೆಂದು ಭಾವಿಸಿದ್ದೆ. ಸದಾ ಚುರುಕಾಗಿ ಸಮಾಜಸೇವೆಯಲ್ಲಿ ತೊಡಗಿದ್ದ, ಉತ್ತಮ ಆರೋಗ್ಯ ಹೊಂದಿದ್ದ ವ್ಯಕ್ತಿಯ ಅಕಾಲಿಕ ನಿಧನ ಅತೀವ ಅನಿರೀಕ್ಷಿತವಾಗಿತ್ತು ಎಂದು ಅವರು ವಿಷಾದ ವ್ಯಕ್ತಪಡಿಸಿದರು.

 

ನಮ್ಮ ಒಡನಾಟ ತಂದೆ–ಮಗನ ಸಂಬಂಧದಂತಿತ್ತು. ಸಣ್ಣ ಹಳ್ಳಿಯ ರೈತನ ಮಗನಾಗಿ ಜನಿಸಿ, ತಾಲೂಕು ಮಟ್ಟದ ನಾಯಕನಾಗಿ ಬೆಳೆದ ಅವರ ಜೀವನ ಪಯಣ ಸುಲಭವಾಗಿರಲಿಲ್ಲ. ರೈತರ ಶಕ್ತಿವರ್ಧನೆಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ ಕೀರ್ತಿ ಅವರದ್ದು. ಸಹಕಾರ ಕ್ಷೇತ್ರದಲ್ಲಿ ವಿಶೇಷವಾಗಿ ರೈತ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಅವರು ಸಲ್ಲಿಸಿದ ಪ್ರಾಮಾಣಿಕ ಸೇವೆಯೇ ಅವರ ವ್ಯಕ್ತಿತ್ವವನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ ಎಂದು ನಿಸರ್ಗ ನಾರಾಯಣಸ್ವಾಮಿ ಹೇಳಿದರು.

ಇದೇ ಸಂದರ್ಭದಲ್ಲಿ ದಿವಂಗತ ಅಪ್ಪಯ್ಯಣ್ಣ ಅವರ ಸವಿ ನೆನಪಿಗಾಗಿ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆ 9ರಿಂದ ಮಧ್ಯಾಹ್ನ 3ರವರೆಗೆ ನೂರಾರು ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಪ್ರದೇಶದ ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ರಕ್ತದಾನ ಶಿಬಿರಕ್ಕೂ ಉತ್ತಮ ಸ್ಪಂದನೆ ದೊರೆಯಿತು.

ಅಪ್ಪಯ್ಯಣ್ಣನವರ ಅಭಿಮಾನಿಗಳಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಅಲ್ಲದೆ ವೃದ್ಧರಿಗೆ ಊರುಗೋಲು ಹಾಗೂ ಕಂಬಳಿ ವಿತರಣೆಯೂ ನಡೆಯಿತು.

ಕಾರ್ಯಕ್ರಮದಲ್ಲಿ ಖ್ಯಾತ ವೈದ್ಯರಾದ ಡಾ. ಆಂಜಿನಪ್ಪ, ಡಾ. ವಿಜಯಕುಮಾರ್, ಅಪ್ಪಯ್ಯಣ್ಣನವರ ಪುತ್ರ ನಾಗರಾಜು, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಿ. ಮುನೇಗೌಡ, ಮಾಜಿ ಎಂಎಲ್‌ಸಿ ರಮೇಶ್ ಗೌಡ, ಮಾಜಿ ಶಾಸಕರಾದ ಗಂಟಿಗಾನಹಳ್ಳಿ ಕೃಷ್ಣಪ್ಪ, ಚಂದ್ರಣ್ಣ, ಹಿರಿಯ ಬಿಜೆಪಿ ಮುಖಂಡ ಹನುಮಂತರಾಯಪ್ಪ, ತೆಂಗು ನಾರು ಮಂಡಳಿ ಅಧ್ಯಕ್ಷ ವೆಂಕಟೇಶ್ ಬಾಬು, ಟಿಎಪಿಸಿಎಂಎಸ್ ಸದಸ್ಯ ಪುರೋಷೋತ್ತಮ, ಜೆಡಿಎಸ್ ಮುಖಂಡರಾದ ಹರೀಶ್ ಗೌಡ, ಹುಸ್ಕೂರು ಆನಂದ್, ಜಗನ್ನಾಥ್, ಮುದ್ದಣ್ಣ, ಬಚ್ಚಳ್ಳಿ ನಾಗರಾಜು, ಗೌರೀಶ್, ಯುವ ಮುಖಂಡ ಉದಯ ಆರಾಧ್ಯ ಸೇರಿದಂತೆ ಹಲವರು ಮುಖಂಡರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

56 minutes ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

3 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

3 hours ago

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

8 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

9 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

22 hours ago