ಅಪ್ಪು ಪುಣ್ಯ ಸ್ಮರಣೆ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ತೂಬಗೆರೆ: ಯುವಕರು ರಕ್ತದಾನಕ್ಕೆ ಸ್ವಯಂ ಪ್ರೇರಿತರಾಗಿ ಮುಂದಾಗಬೇಕು, ರಕ್ತದ ಅನಿವಾರ್ಯತೆ ಮತ್ತು ಮಹತ್ವ ಅರಿತು ಆರೋಗ್ಯವಂತ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು ಎಂದು ಲಯನ್ಸ್ ಕ್ಲಬ್ ರಕ್ತದಾನ ಜಿಲ್ಲಾ ಸಂಯೋಜಕರಾದ ಲಯನ್ ಜಿ.ವೆಂಕಟೇಶ್ ಹೇಳಿದರು.

ಲಯನ್ಸ್ ರಕ್ತ ನಿಧಿ, ಲಯನ್ಸ್ ಕ್ಲಬ್ ದೊಡ್ಡಬಳ್ಳಾಪುರ ಮತ್ತು ಬೆಂಗಳೂರಿನ ಮಹಾವೀರ ಜೈನ್ ಆಸ್ಪತ್ರೆ ವತಿಯಿಂದ ಡಾ. ಪುನೀತ್ ರಾಜಕುಮಾರ್ ರವರ ಎರಡನೇ ವರ್ಷದ ಪುಣ್ಯ ಸ್ಮರಣೆ ಪ್ರಯುಕ್ತ ತೂಬಗೆರೆ ಗ್ರಾಮದಲ್ಲಿ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ರಕ್ತವನ್ನು ಕೃತಕವಾಗಿ ಸೃಷ್ಟಿಸುವುದಕ್ಕಾಗುವುದಿಲ್ಲ, ಆದ್ದರಿಂದ ರಕ್ತಕ್ಕೆ ಪರ್ಯಾಯ ಯಾವುದು ಇಲ್ಲ. ಇತ್ತೀಚಿಗೆ  ಅಪಘಾತ, ಅವಘಡಗಳು ಸಂಭವಿಸಿದಾಗ ರಕ್ತಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಜಾಗತಿಕ ಮಟ್ಟದಲ್ಲಿ ರಕ್ತದ ಬೇಡಿಕೆ ಹೆಚ್ಚಾಗಿದೆ. ಆದ್ದರಿಂದ ರಕ್ತದಾನದ ಕುರಿತು ಜನರಲ್ಲಿ ಅರಿವು ಮೂಡಿಸಬೇಕಾಗಿದೆ ಹಾಗೂ ರಕ್ತದಾನದಿಂದ ಆಗುವ ಪ್ರಯೋಜನಗಳು ಮತ್ತು ದಾನದಿಂದ  ಲಶೇಖರಣೆಯಾಗುವ ರಕ್ತದ ಸದುಪಯೋಗಗಳನ್ನು ಸಾರ್ವಜನಿಕರಿಗೆ ತಿಳಿಸಬೇಕಾಗಿದೆ ಎಂದರು.

ಶಿಬಿರದ ಪ್ರಾಯೋಜಕರಾದ ಗ್ರಾಮ ಪಂಚಾಯಿತಿ ಸದಸ್ಯ ಟಿ.ಎನ್.ಕೃಷ್ಣಪ್ಪ ಮಾತನಾಡಿ ಎಲ್ಲಾ ದಾನಗಳಿಗಿಂತ ರಕ್ತದಾನ ಶ್ರೇಷ್ಠವಾಗಿದ್ದು, ತುರ್ತು ಸಂದರ್ಭದಲ್ಲಿ ರಕ್ತದಾನ ಮಾಡಿ ಪ್ರಾಣ ಉಳಿಸಬಹುದು. ಲಯನ್ಸ್ ಕ್ಲಬ್ ಸಂಸ್ಥೆಯಿಂದ ನಮ್ಮೆಲ್ಲರ ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಸ್ಮರಣೆಯ ದಿನ ರಕ್ತದಾನ ಶಿಬಿರ ಹಮ್ಮಿಕೊಂಡಿರುವುದು ಅರ್ಥಪೂರ್ಣವಾಗಿದೆ ಎಂದರು.

ರಕ್ತದಾನ ಶಿಬಿರದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಲಯನ್ ದೀಪಕ್ ಸುಮನ್, ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ರಾಜಶೇಖರ್, ಲಯನ್ಸ್ ಚಾರಿಟೀಸ್ ಟ್ರಸ್ಟ್  ಉಪಾಧ್ಯಕ್ಷ ಲಯನ್ ಡಾಕ್ಟರ್ ಹುಲಿಕಲ್ ನಟರಾಜ್, ಕಾರ್ಯದರ್ಶಿ ರಮಕಾಂತ್, ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯ ಗಂಗಾಧರ್, ತೂಬಗೆರೆ ಹಿತರಕ್ಷಣ ಸಮಿತಿ ಅಧ್ಯಕ್ಷ ರವಿ ಸಿದ್ದಪ್ಪ, ಯುವ ಮುಖಂಡ ಉದಯ ಆರಾಧ್ಯ  ವಕೀಲ ಪ್ರತಾಪ್, ಪುನೀತ್ ರಾಜಕುಮಾರ್ ಅಭಿಮಾನಿ ಸಂಘದ  ಅಧ್ಯಕ್ಷ ಗಂಗಾಧರ್, ಸೋತೆನಹಳ್ಳಿ ಹರೀಶ್, ಗ್ರಾಮಸ್ಥರಾದ ಮೋಟರ್ ಮಂಜಣ್ಣ, ಸುಧೀರ್, ಸುನಿಲ್,  ಮಧು ಮತ್ತು ಸಾರ್ವಜನಿಕರು ಹಾಜರಿದ್ದರು.

Leave a Reply

Your email address will not be published. Required fields are marked *