ತೂಬಗೆರೆ: ಯುವಕರು ರಕ್ತದಾನಕ್ಕೆ ಸ್ವಯಂ ಪ್ರೇರಿತರಾಗಿ ಮುಂದಾಗಬೇಕು, ರಕ್ತದ ಅನಿವಾರ್ಯತೆ ಮತ್ತು ಮಹತ್ವ ಅರಿತು ಆರೋಗ್ಯವಂತ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು ಎಂದು ಲಯನ್ಸ್ ಕ್ಲಬ್ ರಕ್ತದಾನ ಜಿಲ್ಲಾ ಸಂಯೋಜಕರಾದ ಲಯನ್ ಜಿ.ವೆಂಕಟೇಶ್ ಹೇಳಿದರು.
ಲಯನ್ಸ್ ರಕ್ತ ನಿಧಿ, ಲಯನ್ಸ್ ಕ್ಲಬ್ ದೊಡ್ಡಬಳ್ಳಾಪುರ ಮತ್ತು ಬೆಂಗಳೂರಿನ ಮಹಾವೀರ ಜೈನ್ ಆಸ್ಪತ್ರೆ ವತಿಯಿಂದ ಡಾ. ಪುನೀತ್ ರಾಜಕುಮಾರ್ ರವರ ಎರಡನೇ ವರ್ಷದ ಪುಣ್ಯ ಸ್ಮರಣೆ ಪ್ರಯುಕ್ತ ತೂಬಗೆರೆ ಗ್ರಾಮದಲ್ಲಿ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ರಕ್ತವನ್ನು ಕೃತಕವಾಗಿ ಸೃಷ್ಟಿಸುವುದಕ್ಕಾಗುವುದಿಲ್ಲ, ಆದ್ದರಿಂದ ರಕ್ತಕ್ಕೆ ಪರ್ಯಾಯ ಯಾವುದು ಇಲ್ಲ. ಇತ್ತೀಚಿಗೆ ಅಪಘಾತ, ಅವಘಡಗಳು ಸಂಭವಿಸಿದಾಗ ರಕ್ತಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಜಾಗತಿಕ ಮಟ್ಟದಲ್ಲಿ ರಕ್ತದ ಬೇಡಿಕೆ ಹೆಚ್ಚಾಗಿದೆ. ಆದ್ದರಿಂದ ರಕ್ತದಾನದ ಕುರಿತು ಜನರಲ್ಲಿ ಅರಿವು ಮೂಡಿಸಬೇಕಾಗಿದೆ ಹಾಗೂ ರಕ್ತದಾನದಿಂದ ಆಗುವ ಪ್ರಯೋಜನಗಳು ಮತ್ತು ದಾನದಿಂದ ಲಶೇಖರಣೆಯಾಗುವ ರಕ್ತದ ಸದುಪಯೋಗಗಳನ್ನು ಸಾರ್ವಜನಿಕರಿಗೆ ತಿಳಿಸಬೇಕಾಗಿದೆ ಎಂದರು.
ಶಿಬಿರದ ಪ್ರಾಯೋಜಕರಾದ ಗ್ರಾಮ ಪಂಚಾಯಿತಿ ಸದಸ್ಯ ಟಿ.ಎನ್.ಕೃಷ್ಣಪ್ಪ ಮಾತನಾಡಿ ಎಲ್ಲಾ ದಾನಗಳಿಗಿಂತ ರಕ್ತದಾನ ಶ್ರೇಷ್ಠವಾಗಿದ್ದು, ತುರ್ತು ಸಂದರ್ಭದಲ್ಲಿ ರಕ್ತದಾನ ಮಾಡಿ ಪ್ರಾಣ ಉಳಿಸಬಹುದು. ಲಯನ್ಸ್ ಕ್ಲಬ್ ಸಂಸ್ಥೆಯಿಂದ ನಮ್ಮೆಲ್ಲರ ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಸ್ಮರಣೆಯ ದಿನ ರಕ್ತದಾನ ಶಿಬಿರ ಹಮ್ಮಿಕೊಂಡಿರುವುದು ಅರ್ಥಪೂರ್ಣವಾಗಿದೆ ಎಂದರು.
ರಕ್ತದಾನ ಶಿಬಿರದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಲಯನ್ ದೀಪಕ್ ಸುಮನ್, ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ರಾಜಶೇಖರ್, ಲಯನ್ಸ್ ಚಾರಿಟೀಸ್ ಟ್ರಸ್ಟ್ ಉಪಾಧ್ಯಕ್ಷ ಲಯನ್ ಡಾಕ್ಟರ್ ಹುಲಿಕಲ್ ನಟರಾಜ್, ಕಾರ್ಯದರ್ಶಿ ರಮಕಾಂತ್, ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯ ಗಂಗಾಧರ್, ತೂಬಗೆರೆ ಹಿತರಕ್ಷಣ ಸಮಿತಿ ಅಧ್ಯಕ್ಷ ರವಿ ಸಿದ್ದಪ್ಪ, ಯುವ ಮುಖಂಡ ಉದಯ ಆರಾಧ್ಯ ವಕೀಲ ಪ್ರತಾಪ್, ಪುನೀತ್ ರಾಜಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷ ಗಂಗಾಧರ್, ಸೋತೆನಹಳ್ಳಿ ಹರೀಶ್, ಗ್ರಾಮಸ್ಥರಾದ ಮೋಟರ್ ಮಂಜಣ್ಣ, ಸುಧೀರ್, ಸುನಿಲ್, ಮಧು ಮತ್ತು ಸಾರ್ವಜನಿಕರು ಹಾಜರಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…