ಅಪ್ಪ, ಮಗನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಿನ್ನೆ(ಡಿ.13)ರ ಸಂಜೆ ಸುಮಾರು 4 ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ನಡೆದಿತ್ತು…
ಹಲ್ಲೆಗೊಳಗಾದವರನ್ನು ಅಪ್ಪ ಮಧುಸೂದನ್(49), ಮಗ ಕಾರ್ತಿಕ್ ಕುಮಾರ್(26) ಎಂದು ಗುರುತಿಸಲಾಗಿದೆ….
ಅಡಕಮಾರನಹಳ್ಳಿ ಮೂಲದ ಮಹಿಳೆ ಜೊತೆಯಲ್ಲಿ ಕಾರ್ತಿಕ್ ಕುಮಾರ್ ಗೆ ಅನೈತಿಕ ಸಂಬಂಧವಿತ್ತು. ಈಕೆಯೇ ಈಗ ಕಾರ್ತಿಕ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿಸಿದ್ದಾಳೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ…
ನವೆಂಬರ್ 23 ರಂದು ಮೊದಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆಗ ಎರಡು ಕುಟುಂಬಗಳು ರಾಜಿ ಸಂಧಾನ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.
ಅಕ್ರಮ ಸಂಬಂಧದ ಹಿನ್ನೆಲೆ ಕಾರ್ತಿಕ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಯತ್ನ ನಡೆಸಲಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ..
ಮಗನನ್ನು ಬಿಡಿಸಲು ಹೋದ ತಂದೆ ಮಧುಸೂದನ್ ಮೇಲೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ.
ಇಬ್ಬರಿಗೂ ತಲೆ, ಮುಖ ಹೊಟ್ಟೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಹಲ್ಲೆಗೊಳಗಾದವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ….
ಮಹಿಳೆ ಸೇರಿದಂತೆ ಐದು ಜನಕ್ಕೂ ಹೆಚ್ಚು ದುಷ್ಕರ್ಮಿಗಳು ಸ್ಯಾಂಟ್ರೊ ಕಾರಲ್ಲಿ ಬಂದು ಅಟ್ಯಾಕ್ ಮಾಡಿ ಎಸ್ಕೇಪ್ ಆಗಿದ್ದರು, ಸ್ಥಳದಲ್ಲಿ ಬಿಗುವುನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದರು..
ಕೊನೆ ಕ್ಷಣದಲ್ಲಿ ಗ್ರಾಮಸ್ಥರ ಸಹಾಯದಿಂದ ತಂದೆ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆಸ್ಪತ್ರೆಗೆ ಎಎಸ್ಪಿ ನಾಗರಾಜ್ ಭೇಟಿ ನೀಡಿ ಗಾಯಾಳುಗಳನ್ನು ವಿಚಾರಿಸಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..,
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…..
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…