ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1.15 ಲಕ್ಷ ದಂಡ ವಿಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-I) ಮಹತ್ವದ ತೀರ್ಪು ನೀಡಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹೊಸೂರು ಹೋಬಳಿಯ ಕೆಂಕರೆಯ ನಿವಾಸಿ ನರಸಿಂಹಮೂರ್ತಿ ಕೆ.ಜಿ. (30) ಶಿಕ್ಷೆಗೆ ಒಳಗಾದ ಅಪರಾಧಿ. ಈತನ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ.135/2023ರಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸರಸ್ವತಿ ಕೆ.ಎನ್. ಅವರು ತೀರ್ಪು ಪ್ರಕಟಿಸಿ ಶಿಕ್ಷೆ ವಿಧಿಸಿದ್ದಾರೆ.
ಪೋಕ್ಸೋ ಕಾಯ್ದೆಯ ಸೆಕ್ಷನ್ 6ರಡಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಸಾಧಾರಣ ಜೈಲು ಶಿಕ್ಷೆ ಅನುಭವಿಸಬೇಕು.
ಅದೇ ರೀತಿ ಐಪಿಸಿ ಸೆಕ್ಷನ್ 363ರಡಿ ಅಪಹರಣಕ್ಕೆ ಮೂರು ವರ್ಷಗಳ ಸಾಧಾರಣ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ, ಸೆಕ್ಷನ್ 506ರಡಿ ಬೆದರಿಕೆ ಆರೋಪಕ್ಕೆ ಒಂದು ವರ್ಷ ಸಾಧಾರಣ ಜೈಲು ಶಿಕ್ಷೆ ಹಾಗೂ 5 ಸಾವಿರ ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಕ್ರಮವಾಗಿ ಒಂದು ವರ್ಷ ಹಾಗೂ ಮೂರು ತಿಂಗಳ ಹೆಚ್ಚುವರಿ ಶಿಕ್ಷೆ ವಿಧಿಸಲಾಗಿದೆ.
ಎಲ್ಲ ಶಿಕ್ಷೆಗಳನ್ನೂ ಏಕಕಾಲದಲ್ಲಿ ಜಾರಿಗೊಳಿಸುವಂತೆ ನ್ಯಾಯಾಲಯ ಆದೇಶಿಸಿದೆ.
ಸಂತ್ರಸ್ತೆಗೆ 7.50 ಲಕ್ಷ ಪರಿಹಾರ
ಸಂತ್ರಸ್ತೆಗೆ ಪರಿಹಾರ ನೀಡುವಂತೆಯೂ ನ್ಯಾಯಾಲಯ ಆದೇಶಿಸಿದೆ. ದಂಡದ ಮೊತ್ತದಲ್ಲಿ 75 ಸಾವಿರವನ್ನು ಸಂತ್ರಸ್ತೆಗೆ ನೀಡುವಂತೆ ಸೂಚಿಸಲಾಗಿದೆ.
ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾಗಿ ಪುಷ್ಪಾ ಕೆ ಅವರು ವಾದ ಮಂಡಿಸಿದ್ದರು. ಮಹಿಳಾ ಪೊಲೀಸ್ ಠಾಣೆಯ ತನಿಖಾಧಿಕಾರಿಗಳಾದ ಶುಭ ಎನ್. (ಪಿಎಸ್‌ಐ), ಮಧುಸೂದನ್ ಆರ್. (ಪಿಐ) ಹಾಗೂ ವಿಜಯಲಕ್ಷ್ಮಿ ಎಸ್. (ಪಿಐ) ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ತನಿಖಾ ತಂಡದ ಸಮಗ್ರ ತನಿಖೆ ಹಾಗೂ ಅಭಿಯೋಗದ ಪರಿಣಾಮಕಾರಿ ವಾದದಿಂದ ಆರೋಪ ಸಾಬೀತಾಗಿದ್ದು, ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…