
ತನ್ನ ಅಪ್ರಾಪ್ತನ ವಯಸ್ಸಿನ ಮಗನಿಗೆ ದ್ವಿಚಕ್ರ ವಾಹನವನ್ನು ಚಲಾಯಿಸಲು ನೀಡಿದ ತಪ್ಪಿಗೆ ತಂದೆ ರೂ. 20 ಸಾವಿರ ರೂ. ದಂಡ ತೆತ್ತಿದ್ದಾರೆ.
ಕೊಡಗಿನ ಸೋಮವಾರಪೇಟೆ ತಾಲ್ಲೂಕಿನ ತಲ್ತಾರೆ ಶೆಟ್ಟಳ್ಳಿ ಗ್ರಾಮದ ಯು.ಎಂ. ರಮೇಶ್ ಎಂಬುವವರು ಅಪ್ರಾಪ್ತ ವಯಸ್ಸಿನ ಪುತ್ರನಿಗೆ ದ್ವಿಚಕ್ರ ವಾಹನವನ್ನು ಚಲಾಯಿಸಲು ನೀಡಿದ್ದರು.
ಈ ಕುರಿತು ಸೋಮವಾರಪೇಟೆ ಪೊಲೀಸ್ ಠಾಣಾ ವೃತ್ತ ನಿರೀಕ್ಷಕರಾದ ಮುದ್ದು ಮಾದೇವ್ ಅವರು ಯು.ಎಂ. ರಮೇಶ್ ರವರ ವಿರುದ್ಧ ಪ್ರಕರಣ ದಾಖಲಿಸಿದ್ದರು.
ವಿಚಾರಣೆ ನಡೆಸಿದ ಸೋಮವಾರಪೇಟೆ ಜೆ.ಎಂ.ಎಫ್.ಸಿ
ನ್ಯಾಯಾಲಯದ ನ್ಯಾಯಾಧೀಶರಾದ ಕೆ. ಗೋಪಾಲಕೃಷ್ಣ ಅವರು ಇಂದು ರೂ. 20 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ವಾಹನ ಚಾಲನಾ ಪರವಾನಗಿ ಇಲ್ಲದೇ ಮತ್ತು ಅಪ್ರಾಪ್ತರು ವಾಹನ ಚಲಾವಣೆ ಮಾಡುತ್ತಿರುವುದರಿಂದ ಅಪಘಾತಗಳು ಹೆಚ್ಚಾಗುತ್ತದೆ. ಈ ಹಿನ್ನೆಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದ್ದು, ವಾಹನ ಮಾಲೀಕರು ಜಾಗೃತರಾಗಬೇಕು. ಅಪ್ರಾಪ್ತರಿಗೆ ಮತ್ತು ಚಾಲನಾ ಪರವಾನಗಿ ಇಲ್ಲದವರಿಗೆ ವಾಹನ ನೀಡಿ ಪೇಚಿಗೆ ಸಿಲುಕಬಾರದು.