ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೂ ಮಹತ್ವದ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಸುಮಾರು ರೂ.8 ಕೋಟಿ 69 ಲಕ್ಷ ಮೌಲ್ಯದ ಅಸಮತೋಲನ ಆಸ್ತಿ ಪತ್ತೆಯಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ಲೋಕಾಯುಕ್ತ ಮಂಗಳೂರು ವಿಭಾಗದ ಎಸ್ಪಿ ದಿನೇಶ್ ಕುಮಾರ್ ಅವರ ನೇತೃತ್ವದಲ್ಲಿ ಮಾರ್ಚ್ 11ರಿಂದ ಮಾರ್ಚ್ 12ರವರೆಗೆ ಎರಡು ದಿನಗಳ ಕಾಲ ಈ ಶೋಧ ಕಾರ್ಯಾಚರಣೆ ನಡೆದಿತ್ತು. ಅಧಿಕಾರಿಗೆ ಸಂಬಂಧಿಸಿದಂತೆ ಒಟ್ಟು 15 ಸ್ಥಳಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದರು. ದಾಳಿಯ ವೇಳೆ ಅಧಿಕಾರಿಗಳಿಗೆ 11 ನಿವೇಶನಗಳು, 6 ವಾಸದ ಮನೆಗಳು ಹಾಗೂ 31 ಎಕರೆ ಕೃಷಿ ಜಮೀನು ಸೇರಿದಂತೆ ಒಟ್ಟು ರೂ.6,90,64,716 ಮೌಲ್ಯದ ಸ್ಥಿರಾಸ್ತಿಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.
ಅಲ್ಲದೇ ವಿವಿಧ ರೂಪದಲ್ಲಿ ಭಾರಿ ಪ್ರಮಾಣದ ಚರಾಸ್ತಿಯೂ ಪತ್ತೆಯಾಗಿದೆ. ರೂ. 3,95,941 ನಗದು ರೂ. 1,47,50,506 ಮೌಲ್ಯದ ಚಿನ್ನಾಭರಣ, ರೂ. 17,00,000 ಮೌಲ್ಯದ ವಾಹನಗಳು, ರೂ. 25,75,000 ಮೌಲ್ಯದ ಬ್ಯಾಂಕ್ ಠೇವಣಿ, ರೂ. 72,68,554 ಮೌಲ್ಯದ ಇತರ ವಸ್ತುಗಳು ಇವೆಲ್ಲವನ್ನು ಸೇರಿಸಿ ರೂ.2,66,90,001 ಮೌಲ್ಯದ ಚರಾಸ್ತಿ ಪತ್ತೆಯಾಗಿದೆ. ಸ್ಥಿರಾಸ್ತಿ ಹಾಗೂ ಚರಾಸ್ತಿಯನ್ನು ಸೇರಿಸಿ ಒಟ್ಟು ರೂ.8,69,54,717 ಮೌಲ್ಯದ ಆಸ್ತಿ ಪತ್ತೆಯಾಗಿದೆ.
ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ. ವರ್ಷದಿಂದ ವರ್ಷಕ್ಕೆ ಏರುತ್ತಿರುವ…
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…