ಅಬಾಕಸ್ ಸ್ಪರ್ಧೆಯಲ್ಲಿ ನ್ಯಾಷನಲ್ ಚಾಂಪಿಯನ್ ಆದ ಸರ್ಕಾರಿ ಶಾಲಾ ವಿದ್ಯಾರ್ಥಿ

ಚೆನ್ನೈನ ಟ್ರೇಡ್ ಸೆಂಟರ್ ನಲ್ಲಿ ನಡೆದ 42ನೇ ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಆದ ನಗರದ ಎಲೆಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ವಿದ್ಯಾರ್ಥಿ ವಸಂತ್.ಎಸ್ ಚಾಂಪಿಯನ್ ಆಗಿ ತಾಲೂಕಿಗೆ ಕೀರ್ತಿ ತಂದ ವಿದ್ಯಾರ್ಥಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ರಂಗಪ್ಪ ಅವರು ಶುಭಾಶಯ ಕೋರಿ, ಅಭಿನಂದನೆ ಸಲ್ಲಿಸಿದರು.

ನಗರಸಭೆಯಲ್ಲಿ ಪೌರಕಾರ್ಮಿರಾಗಿ ಕೆಲಸ ಮಾಡುತ್ತಿರುವ ಸುಬ್ಬು ಮತ್ತು ಮಂಜಮ್ಮ ಅವರ ಪುತ್ರ ವಸಂತ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.

ಸೆಪ್ಟೆಂಬರ್ 10 ರಂದು ಚೆನ್ನೈ ನಗರದಲ್ಲಿ ಆಯೋಜಿಸಲಾಗಿದ್ದ 42ನೇ ರಾಷ್ಟ್ರೀಯ ಅಬಾಕಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಸಂತ್.ಎಸ್ ಅಬಾಕಸ್‌ ಸ್ಪರ್ಧೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾನೆ.

ವಿವಿಧ ರಾಜ್ಯಗಳ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ರಾಷ್ಟ್ರೀಯ ಸ್ಪರ್ಧೆಯಲ್ಲಿ B4 ಚಾಂಪಿಯನ್ ಸ್ಥಾನ ಪಡೆದ ವಸಂತ್.

ಈ ವೇಳೆ ಬಿಇಒ ರಂಗಪ್ಪ ಮಾತನಾಡಿ, ನಮ್ಮ ನಗರದ ಎಲೆಪೇಟೆ ಸರ್ಕಾರಿ ಶಾಲೆಯ ಬಾಲಕ ಚೆನೈ ನಲ್ಲಿ ನಡೆದ  ರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಉನ್ನತವಾದ ದರ್ಜೆ ಪಡೆದು ಬಂದಿದ್ದಾನೆ, ಅಪರೂಪವಾದ ಇಂತಹ ಮಕ್ಕಳು ನಮ್ಮ ಇಲಾಖೆಗೆ ಹೆಮ್ಮೆಯಾಗಿದ್ದು ವಿದ್ಯಾರ್ಥಿ ಮತ್ತು ಅವರ ತಂದೆ ತಾಯಿ ಹಾಗೂ ಶಾಲೆಯ ಸಿಬ್ಬಂದಿ ವರ್ಗಕ್ಕೆ ಧನ್ಯವಾದಗಳು ತಿಳಿಸುತ್ತೇನೆ ಎಂದರು.

ಮುಖ್ಯಶಿಕ್ಷಕ ನರಸೇಗೌಡ ಮಾತನಾಡಿ, ನಮ್ಮ ಸರ್ಕಾರಿ ಶಾಲೆಯ ಮಗು ರಾಷ್ಟ್ರೀಯ ಮಟ್ಟದ ಅಬಾಕಸ್‌ನಲ್ಲಿ ಚಾಂಪಿಯನ್ ಆಗಿ ನಮ್ಮ ಶಾಲೆಗೆ ಕೀರ್ತಿ ತಂದಿದ್ದಾನೆ, ವಸಂತ್ ಇನ್ನೂ ಉನ್ನತ ಮಟ್ಟದ ಶಿಕ್ಷಣ ಪಡೆದ ಸಮಾಜದಲ್ಲಿ ಉನ್ನತವಾದ ವ್ಯಕ್ತಿಯಾಗಲಿ ಎಂಬುದು ನಮ್ಮ ಆಶಯ ಎಂದರು.

ವಿದ್ಯಾರ್ಥಿ ವಸಂತ್ ಮಾತನಾಡಿ, ನಮ್ಮ ತಂದೆ ತಾಯಿ ನಗರಸಭೆಯಲ್ಲಿ ಕೆಲಸ ಮಾಡುತ್ತಿದ್ದು ನನ್ನ ಶಿಕ್ಷಣದ ವಿಷಯದಲ್ಲಿ ಹೆಚ್ಚು ಆಸಕ್ತಿ ವಹಿಸುತ್ತಾರೆ, ಉಷಾ ಮೇಡಂ ಬಳಿ ತರಬೇತಿ ಪಡೆಯುತ್ತಿದ್ದೇನೆ, ನಮ್ಮ ಶಾಲೆಯ ಎಲ್ಲಾ ಶಿಕ್ಷಕರು ಉತ್ತಮವಾಗಿ ಕಲಿಸಿಕೊಡುತ್ತಾರೆ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಾರೆ ಎಂದರು

ಈ ವೇಳೆ ಬಿಆರ್‌ಪಿ ಶ್ರೀಕಾಂತ್, ಸಹ ಶಿಕ್ಷಕರಾದ ಅಶೋಕ್, ನೀಲಾಂಭಿಕೆ, ಶಿವಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

3 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

5 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

5 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

7 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

11 hours ago

ಸ್ಟಿಂಗ್ ಆಪರೇಷನ್ ವಿವಾದ: ಸಿದ್ದರಾಮಯ್ಯನವರದ್ದು ಕುಮಾರಸ್ವಾಮಿ ತರಹದ ಚರಿತ್ರೆಯಲ್ಲ: ಎಚ್.ಡಿ.ಕೆ ವಿರುದ್ಧ ಸಚಿವ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ

ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…

23 hours ago