ಅಭಿವೃದ್ಧಿ ಪಥದಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ-ಶಾಸಕ ಧೀರಜ್‌ಮುನಿರಾಜ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಭಿವೃದ್ಧಿ ಪಥದಲ್ಲಿ ಯಶಸ್ವಿಯಾಗಿ ಆಡಳಿತ ನಡೆಸುವ ಮೂಲಕ 9 ವರ್ಷದ ಅವಧಿಯನ್ನು ಪೂರ್ಣಗೊಳಿಸಿದೆ ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.

ನಗರದ ಬಿಜೆಪಿ ಜಿಲ್ಲಾ ಕಾರ್ಯಲಯದಲ್ಲಿ ಮಂಗಳವಾರ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕಳೆದ 9 ವರ್ಷದ ಆಡಳಿತದಲ್ಲಿ ಹಲವಾರು ಕಾರ್ಯಕ್ರಮಗಳು, ಯೋಜನೆಗಳ ಮೂಲಕ ಕೇಂದ್ರ ಸರ್ಕಾರ ಜನಪರ ಆಡಳಿತವನ್ನು ನೀಡಿದೆ.

ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ನಾಯಕತ್ವದಡಿ ಭಾರತೀಯ ಸೇನೆ ವಿಶ್ವದಲ್ಲಿಯೇ ಅತ್ಯಂತ ಬಲಿಷ್ಠ ಸೇನೆಯಾಗಿದೆ. ಅಂತಾರಾಷ್ಟ್ರೀಯ ಸಂಬಂಧಗಳು ವೃದ್ಧಿಸಿವೆ. ಹತ್ತಾರು ಸಂಕಷ್ಟದ ಸಮಯದಲ್ಲಿ ಯಶಸ್ವಿಯಾಗಿ ನಿಭಾಯಿಸಲಾಗಿದೆ.

ಮಹಾಮಾರಿ ಕೊವಿಡ್ ಕಾಲದಲ್ಲಿಯೂ ವಿಶ್ವದಲ್ಲಿಯೆ ಅತ್ಯಂತ ಹೆಚ್ಚು ಯಶಸ್ವಿಯಾಗಿ ಎದುರಿಸಲಾಗಿದೆ. ಕ್ರಾಂತಿಯ ರೀತಿಯಲ್ಲಿ ಕೊರೊನಾವನ್ನು ಸದೆಬಡಿಯಲಾಗಿದೆ. ಹಲವು ವರ್ಷಗಳ ಬಳಿಕ ಜಲಜೀವನ್ ಯೋಜನೆ ಮುಖಾಂತರ ಪ್ರತಿ ಮನೆ ಮನೆಗೆ ನೀರಿನ ಸೌಲಭ್ಯ ನೀಡಲಾಗಿದೆ. ಎನ್ಇಪಿ ಶಿಕ್ಷಣ ವ್ಯವಸ್ಥೆ ಸಾಕಷ್ಟು ಬದಲಾವಣೆ ಮಾಡಿದೆ ಎಂದರು.

ಈ ವೇಳೆ ಜಿಲ್ಲಾ ವಕ್ತಾರೆ ಪುಷ್ಪಶಿವಶಂಕರ್, ಗ್ರಾಮಾಂತರ ಅಧ್ಯಕ್ಷ ನಾಗೇಶ್, ನಗರಾಧ್ಯಕ್ಷ ಮುದ್ದಪ್ಪ, ಜಿಲ್ಲಾ ಕಾರ್ಯದರ್ಶಿ ಗೋಪಿನಾಥ್, ನಗರಸಭಾ ಸದಸ್ಯ ವೆಂಕಟೇಶ್, ಡಾ. ನಾರಾಯಣ್ ಇದ್ದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

6 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

7 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

13 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

14 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

19 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago