ಅಮಿತ್ ಶಾ ಅಂಗಳಕ್ಕೆ ಎಸ್.ಆರ್.ವಿಶ್ವನಾಥ್ ಮುನಿಸು

ಯಲಹಂಕ: ತಮ್ಮ ಪುತ್ರನಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಮುನಿಸಿಕೊಂಡಿರುವ ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಭೇಟಿಗೆ ಆಗಮಿಸಿದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಬಂದ ದಾರಿಗೆ ಸುಂಕವಿಲ್ಲದಂತೆ ಬರಿಗೈಲಿ ವಾಪಸಾಗಿದ್ದಾರೆ.

ಯಲಹಂಕದ ಸಿಂಗನಾಯಕನಹಳ್ಳಿಯಲ್ಲಿರುವ ವಿಶ್ವನಾಥ ನಿವಾಸಕ್ಕೆ ಭಾನುವಾರ ಆಗಮಿಸಿದಾಗ ಶಾಸಕರು ಮನೆಯಲ್ಲಿಲ್ಲ ಎಂದು ಹೇಳಿ ಭದ್ರತಾ ಸಿಬ್ಬಂದಿ, ಸುಧಾಕರ್ ಅವರನ್ನು ಗೇಟಿನಿಂದ ಒಳಬಿಡದೇ ವಾಪಸ್ ಕಳುಹಿಸಿದರು.

ಇದರಿಂದ ನಿರಾಶರಾದ ಸುಧಾಕರ್ ವಾಪಸ್ ತೆರಳಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶ್ವನಾಥ ಅವರ‌ ಮನವೊಲಿಸಲು ಕರೆ ಮಾಡಿದೆ. ಮೆಸೇಜ್ ಕೂಡ ಕಳುಹಿಸಿದೆ. ಆದರೆ, ಯಾವುದಕ್ಕೂ ಉತ್ತರಿಸಲಿಲ್ಲ.‌ ಹಾಗಾಗಿ‌ ಸಮಾಧಾನಪಡಿಸಲು ಮನೆಯ ಬಳಿ ಬಂದೆ. ವಿಶ್ವನಾಥ್ ಅವರು ಹೊರಗೆ ಹೋಗಿದ್ದಾರೆ‌ ಎಂದು ಭದ್ರತಾ ಸಿಬ್ಬಂದಿ ತಿಳಿಸಿದರು ಎಂದರು.

ಈಗಾಗಲೇ ಕ್ಷೇತ್ರದ 7 ಕಡೆ ಪ್ರಚಾರ ಆರಂಭವಾಗಿದೆ. ಆದರೆ, ಯಲಹಂಕದಲ್ಲಿ ಇನ್ನೂ ಪ್ರಚಾರ ಆರಂಭಿಸಿಲ್ಲ. ಎಲ್ಲರಿಗೂ ಗೊತ್ತಿರುವಂತೆ ವಿಶ್ವನಾಥ್ ಅವರ ಮಗನಿಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರವಿದೆ. ಇನ್ನೂ ಎರಡು ಮೂರು ಬಾರಿ ಅವರ ಮನವೊಲಿಸುವ ಪ್ರಯತ್ನ ಮಾಡುತ್ತೇನೆ. ಇದೊಂದೇ ಚುನಾವಣೆ ಕೊನೆಯಲ್ಲ. ಮುಂದೆಯೂ ನಾವು ಜೊತೆಯಾಗಿ ಸಾಗಬೇಕಾಗುತ್ತದೆ ಎಂದು ಹೇಳಿದರು.

ಅಸಮಾಧಾನಿತ ವಿಶ್ವನಾಥ್ ಅವರ ಜೊತೆ ಮಾತನಾಡುವುದಾಗಿ ಯಡಿಯೂರಪ್ಪ ಅವರು ಭರವಸೆ ಕೊಟ್ಟಿದ್ದಾರೆ. ಏ.2 ರಂದು ಅಮಿತ್ ಶಾ ಬಂದಾಗ ಅವರ ಹಂತದಲ್ಲಿಯೂ ಸಮಸ್ಯೆ ಬಗೆಹರಿಯುವ ಭರವಸೆ ಇದೆ ಎಂದು ಹೇಳಿದರು.

ರಾಜಕಾರಣದಲ್ಲಿ ಎಲ್ಲವೂ ಸರಾಗವಾದರೆ ಅದು ರಾಜಕಾರಣ ಅನ್ನಿಸಿಕೊಳ್ಳುವುದಿಲ್ಲ. ಬರೀ ಕೆಂಪು ಗುಲಾಬಿ ಹಾದಿ ಇರದೇ ಮುಳ್ಳಿನ ಹಾದಿಯೂ ಇರಲಿದೆ. ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ಪ್ರಯತ್ನ ಮಾಡುತ್ತೇವೆ ಎಂದರು.

ವಿಶ್ವನಾಥ್ ಹಾಗೂ ನನಗೆ ಯಾವುದೇ ವೈಯುಕ್ತಿಕ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದರು.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

10 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

10 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

11 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

17 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

19 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

22 hours ago