ಯಲಹಂಕ: ತಮ್ಮ ಪುತ್ರನಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಮುನಿಸಿಕೊಂಡಿರುವ ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಭೇಟಿಗೆ ಆಗಮಿಸಿದ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಬಂದ ದಾರಿಗೆ ಸುಂಕವಿಲ್ಲದಂತೆ ಬರಿಗೈಲಿ ವಾಪಸಾಗಿದ್ದಾರೆ.
ಯಲಹಂಕದ ಸಿಂಗನಾಯಕನಹಳ್ಳಿಯಲ್ಲಿರುವ ವಿಶ್ವನಾಥ ನಿವಾಸಕ್ಕೆ ಭಾನುವಾರ ಆಗಮಿಸಿದಾಗ ಶಾಸಕರು ಮನೆಯಲ್ಲಿಲ್ಲ ಎಂದು ಹೇಳಿ ಭದ್ರತಾ ಸಿಬ್ಬಂದಿ, ಸುಧಾಕರ್ ಅವರನ್ನು ಗೇಟಿನಿಂದ ಒಳಬಿಡದೇ ವಾಪಸ್ ಕಳುಹಿಸಿದರು.
ಈಗಾಗಲೇ ಕ್ಷೇತ್ರದ 7 ಕಡೆ ಪ್ರಚಾರ ಆರಂಭವಾಗಿದೆ. ಆದರೆ, ಯಲಹಂಕದಲ್ಲಿ ಇನ್ನೂ ಪ್ರಚಾರ ಆರಂಭಿಸಿಲ್ಲ. ಎಲ್ಲರಿಗೂ ಗೊತ್ತಿರುವಂತೆ ವಿಶ್ವನಾಥ್ ಅವರ ಮಗನಿಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಬೇಸರವಿದೆ. ಇನ್ನೂ ಎರಡು ಮೂರು ಬಾರಿ ಅವರ ಮನವೊಲಿಸುವ ಪ್ರಯತ್ನ ಮಾಡುತ್ತೇನೆ. ಇದೊಂದೇ ಚುನಾವಣೆ ಕೊನೆಯಲ್ಲ. ಮುಂದೆಯೂ ನಾವು ಜೊತೆಯಾಗಿ ಸಾಗಬೇಕಾಗುತ್ತದೆ ಎಂದು ಹೇಳಿದರು.
ಅಸಮಾಧಾನಿತ ವಿಶ್ವನಾಥ್ ಅವರ ಜೊತೆ ಮಾತನಾಡುವುದಾಗಿ ಯಡಿಯೂರಪ್ಪ ಅವರು ಭರವಸೆ ಕೊಟ್ಟಿದ್ದಾರೆ. ಏ.2 ರಂದು ಅಮಿತ್ ಶಾ ಬಂದಾಗ ಅವರ ಹಂತದಲ್ಲಿಯೂ ಸಮಸ್ಯೆ ಬಗೆಹರಿಯುವ ಭರವಸೆ ಇದೆ ಎಂದು ಹೇಳಿದರು.
ರಾಜಕಾರಣದಲ್ಲಿ ಎಲ್ಲವೂ ಸರಾಗವಾದರೆ ಅದು ರಾಜಕಾರಣ ಅನ್ನಿಸಿಕೊಳ್ಳುವುದಿಲ್ಲ. ಬರೀ ಕೆಂಪು ಗುಲಾಬಿ ಹಾದಿ ಇರದೇ ಮುಳ್ಳಿನ ಹಾದಿಯೂ ಇರಲಿದೆ. ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ಪ್ರಯತ್ನ ಮಾಡುತ್ತೇವೆ ಎಂದರು.
ವಿಶ್ವನಾಥ್ ಹಾಗೂ ನನಗೆ ಯಾವುದೇ ವೈಯುಕ್ತಿಕ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದರು.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…