ಅಮಿತ್ ಶಾ ಅವರ ಹೇಳಿಕೆ ಮಹಿಳೆಯರು, ಪರಿಶಿಷ್ಟ ಜಾತಿ, ಪಂಗಡಗಳು, ಒಬಿಸಿ ಇತರೆ ಹಿಂದುಳಿದ ವರ್ಗಗಳಿಗೆ ಘಾಸಿ ಉಂಟುಮಾಡಿದೆ- ಅಮಿತ್ ಶಾರನ್ನ ಸಚಿವ ಸಂಪುಟದಿಂದ ವಜಾ ಮಾಡಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು-ಹಿರಿಯ ಹೋರಾಟಗಾರ ಸಂಜೀವ್ ನಾಯಕ್ ಆಗ್ರಹ

ದೊಡ್ಡಬಳ್ಳಾಪುರ : ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಮಹಿಳೆಯರು, ಪರಿಶಿಷ್ಟ ಜಾತಿ, ಪಂಗಡಗಳು, ಒಬಿಸಿ ಇತರೆ ಹಿಂದುಳಿದ ವರ್ಗಗಳಿಗೆ ಘಾಸಿ ಉಂಟುಮಾಡಿದೆ. ಹಾಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಈ ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ಹೋರಾಟಗಾರ ಸಂಜೀವ್ ನಾಯಕ್ ತಮ್ಮ ಆಕ್ರೋಶ ವ್ಯಕ್ತ ಪಡಿಸಿದರು.

ನಗರದ ತಾಲ್ಲೂಕು ಕಚೇರಿ ವೃತ್ತದಲ್ಲಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಅಂಬೇಡ್ಕರ್ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಖಂಡಿಸಿ ಪ್ರತಿಭಟನೆ ನೆಡೆಸಲಾಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಭಾರತದ ಚರಿತ್ರೆಯಲ್ಲಿ ಜಾತಿ ವ್ಯವಸ್ಥೆಯಿಂದ ತುಳಿತಕ್ಕೆ ಒಳಗಾದವರ, ನೊಂದವರ ಹಾಗೂ ಶೋಷಿತರ ಧ್ವನಿಯಾಗಿ ಸರ್ವರು ಸಮಾನರು ಎಂದು ಪ್ರತಿಪಾದಿಸಿದ ಭಾರತ ರತ್ನ ಡಾ.ಬಿ ಆರ್ ಅಂಬೇಡ್ಕರ್ ಅವರು ಇಡೀ ಪ್ರಪಂಚವೇ ಮೆಚ್ಚುವ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು, ಬಹುಜನ ಹಿತಾಯ ಬಹುಜನ ಸುಖಾಯ ಎಂಬ ಆಶಯದ ಸಂವಿಧಾನವನ್ನು ರಚಿಸಿ ಕೊಟ್ಟವರು. ಬಾಬಾ ಸಾಹೇಬರು ಬರೆದ ಸಂವಿಧಾನದಿಂದ ಈ ದೇಶದ ಮಹಿಳೆಯರು ಹಾಗೂ ಶೋಷಿತ ಸಮುದಾಯಗಳಿಗೆ ಅಕ್ಷರ, ಅಧಿಕಾರ ದೊರೆತು, ಸಮಾಜದಲ್ಲಿ ತಲೆ ಎತ್ತಿ ನಿಲ್ಲವಂತಾಯಿತು. ಆದರೆ, ಈ ಸಂವಿಧಾನವನ್ನು ಹಾಗೂ ಅಂಬೇಡ್ಕರ್ ಅವರನ್ನು ಆರಂಭದಿಂದಲೂ ವಿರೋಧಿಸುತ್ತಾ ಬಂದ ಸಂಘಪರಿವಾರ ಮತ್ತು ಬಿಜೆಪಿ ಪರಿಷ್ಕರಣೆ ಎಂಬ ಹೆಸರಿನಲ್ಲಿ ಸಂವಿಧಾನ ಬದಲಾವಣೆಯ ಮಾತುಗಳನ್ನೂ ಅಡಿತ್ತು ಎಂಬುದನ್ನು ಗಮನಿಸಬೇಕಾದ ವಿಚಾರವಾಗಿದೆ ಎಂದರು.

ಪ್ರತಿಭಟನಾಕಾರರು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕೃತಿ ದಹಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ದಲಿತ ಮುಖಂಡರಾದ ರಾಮಮೂರ್ತಿ (ರಾಮು ) ನೇರಳೆಘಟ್ಟ ಮಾತನಾಡಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸದನದಲ್ಲಿ ಮಾತನಾಡುತ್ತಾ ಅಂಬೇಡ್ಕರ್ ಎಂದು ಹೇಳುವುದು ಇಂದು ಫ್ಯಾಷನ್ ಆಗಿದೆ. “ಅಂಬೇಡ್ಕರ್ ಹೆಸರು ಹೇಳುವ ಬದಲು ದೇವರ ಹೆಸರು ಹೇಳಿದ್ದರೆ ಏಳೇಳೂ ಜನ್ಮಕ್ಕೂ ಸ್ವರ್ಗಕ್ಕೆ ಹೋಗುತ್ತಿದ್ದೀರಿ” ಎಂದು ಹೇಳಿಕೆ ನೀಡುವ ಮೂಲಕ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕ‌ರ್ ಅವರನ್ನು ಅವಹೇಳನ ಮಾಡಿದ್ದಾರೆ.ಹಾಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಈ ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಿ ಅವರ ವಿರುದ್ಧ ಸೂಕ್ತ ಕಕ್ರಮ ಕೈಗೊಳ್ಳಬೇಕೆಂದು ಅಗ್ರಹಿಸಿದರು.

ಪ್ರತಿಭಟನೆಯಲ್ಲಿ ದಲಿತ ಮುಖಂಡರಾದ ಶಿವಶಂಕರ್, ಪತ್ರಕರ್ತ ಹಾಗೂ ಹೋರಾಟಗಾರ ರಾಜು ಸಣ್ಣಕ್ಕಿ, ಗುಳ್ಯ ಹನುಮಣ್ಣ, ಮೈಲಾರಪ್ಪ, ಸತೀಶ್, ರತ್ನಮ್ಮ, ನಾಗರತ್ನಮ್ಮ, ರುದ್ರರಾಧ್ಯ, ನಟರಾಜು, ತಳಗವಾರ ಮುನಿಯಪ್ಪ, ಪುನೀತ್, ಅಶೋಕ, ರಾಜಶೇಖರ್, ವಿ.ವೆಂಕಟೇಶ್, ನಾಗಮ್ಮಜ್ಜಿ, ಮಾರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

8 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

12 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

12 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

17 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago