Categories: ಕೋಲಾರ

ಅಮಿತ್‌ ಶಾ, ಸಿ.ಟಿ.ರವಿ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

ಕೋಲಾರ: ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ಉಚ್ಚಾಟಿಸಬೇಕು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನಿಂದಿಸಿರುವ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರನ್ನು ಪರಿಷತ್‌ ಸ್ಥಾನದಿಂದ ವಜಾ ಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ ಘಟಕದಿಂದ ಶನಿವಾರ ನಗರದ ಮೆಕ್ಕೆ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಪಕ್ಷ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಮಾತನಾಡಿ ದೇಶದಲ್ಲಿ ಸಂಘಪರಿವಾರದವರಿಗೆ ಹಾಗೂ ಬಿಜೆಪಿ ಪಕ್ಷಕ್ಕೆ ಅಂಬೇಡ್ಕರ್‌ ಅವರ ಹೆಸರು ನುಂಗಲಾರದ ತುತ್ತಾಗಿದೆ ಬಿಜೆಪಿಯವರಿಗೆ ಅಧಿಕಾರಕ್ಕೇರಲು ಮಾತ್ರ ಸಂವಿಧಾನ ಬೇಕು ಆದರೆ ಅವರ ಆಶಯಗಳನ್ನು ವಿರೋಧಿಸಿಕೊಂಡು ಬಂದಿದ್ದಾರೆ ಬಿಜೆಪಿ ಪಕ್ಷದ ನಾಯಕರಲ್ಲಿ ಅಂಬೇಡ್ಕರ್‌ ಬಗ್ಗೆ ಮೊದಲಿಂದಲೂ ತಿರಸ್ಕಾರದ ಭಾವನೆ ಇದೆ ಎಂದೂ ಆರೋಪಿಸಿದರು.

ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರ ನಡೆಸಿಕೊಂಡು ಬಂದಿರುವ ಬಿಜೆಪಿ ಪಕ್ಷವು ನಿರಂತರವಾಗಿ ಸ್ವಾತಂತ್ರ್ಯ ಹೋರಾಟಗಾರರನ್ನು ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ವಿರುದ್ದ ಇಲ್ಲಸಲ್ಲದ ಆರೋಪಗಳನ್ನು ಮಾಡಿದ್ದಾರೆ ಅಂಬೇಡ್ಕರ್ ಅಂತಹ ಮಹಾನ್ ಚೇತನ ದೇಶಕ್ಕೆ ಸಂವಿಧಾನ ಕೊಟ್ಟು ಅದರಿಂದಲೇ ಮತದಾನದಿಂದ ಅಧಿಕಾರವನ್ನು ಕೊಟ್ಟಿದ್ದಾರೆ ಎಂಬುದನ್ನು ಮರೆತಿದ್ದಾರೆ ಅಂಬೇಡ್ಕರ್ ಒಬ್ಬ ವ್ಯಕ್ತಿಯಲ್ಲ ಅವರೊಬ್ಬರು ದೇಶದ ಶಕ್ತಿಯಾಗಿದ್ದು ಜನ ಕಾಯತ್ತಾರೆ ಇದ್ದಾರೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠವನ್ನು ಕಲಿಸಲಿದ್ದಾರೆ ಎಂದು ತಿಳಿಸಿದರು.

ಈ ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾ ಕಾಂಗ್ರೆಸ್ ವಕ್ತಾರ ಎಲ್.ಎ ಮಂಜುನಾಥ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಜಿಲ್ಲಾ ವಿವಿಧ ಘಟಕಗಳ ಅಧ್ಯಕ್ಷರಾದ ಎಸ್ಸಿ ಘಟಕದ ಕೆ.ಜಯದೇವ್, ಕಾರ್ಮಿಕ ಘಟಕದ ಹೊನ್ನೇನಹಳ್ಳಿ ಯಲ್ಲಪ್ಪ, ಎಸ್ಟಿ ಘಟಕದ ನಾಗರಾಜ್, ಪದವೀಧರ ಘಟಕದ ಸುಧೀರ್, ಮೀನುಗಾರಿಕೆ ಘಟಕದ ರಂಗನಾಥ್, ಮಹಿಳಾ ಘಟಕದ ರತ್ನಮ್ಮ, ಬೀದಿಬದಿ ವ್ಯಾಪಾರಸ್ಥ ಘಟಕದ ಮಂಜುನಾಥ್, ಮುಖಂಡರಾದ ವೆಂಕಟಪತಿಯಪ್ಪ, ರಾಮಯ್ಯ, ನಾಗರಾಜಗೌಡ, ಸಂಜೀವಪ್ಪ, ಹರೀಶ್ ಮುಂತಾದವರು ವಹಿಸಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

5 hours ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

7 hours ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

8 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

22 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

1 day ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

1 day ago