Categories: ಕೋಲಾರ

‘ಅಮಿತ್ ಶಾ ಹಾಗೂ ಸಿ.ಟಿ ರವಿ ಜನಪ್ರತಿನಿಧಿಯಾಗಿರಲು ಯೋಗ್ಯತೆಯಿಲ್ಲ’- ಮೈಲಾಂಡಹಳ್ಳಿ ಮುರಳಿ

ಕೋಲಾರ: ಸಂವಿಧಾನ ರಚನೆಕಾರ ಅಂಬೇಡ್ಕ‌ರ್ ಕುರಿತು ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಅವಹೇಳನಕಾರಿ ಹೇಳಿಕೆ ಹಾಗೂ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಕೆಗೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಖಂಡಿಸಿದ ಅವರು ಬಿಜೆಪಿ ಮತ್ತು ಆರ್.ಎಸ್.ಎಸ್ ಸಂಘಪರಿವಾರದವರು ಪದೇ ಪದೇ ತಮ್ಮ ಅನಾಗರಿಕ ಸಂಸ್ಕೃತಿಯನ್ನು ತೋರಿಸುತ್ತಿದ್ದಾರೆ, ದೇಶದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಾತ್ರ ಬಹುಮುಖ್ಯವಾಗಿದೆ ಅಂತಹ ಪಕ್ಷದ ಹಿರಿಯ ಮುಖಂಡರಿಗೆ ಒಂದಲ್ಲ ಒಂದು ರೀತಿಯಲ್ಲಿ ಅವಹೇಳನಕಾರಿ ಭಾಷೆಯನ್ನು ಬಳಸುತ್ತಾ ಬಂದಿರುವ ಅವರು ತಮ್ಮ ಹರುಕು ಬಾಯಿಯನ್ನು ಮತ್ತೆ ಅವಾಚ್ಯಕ ಶಬ್ದಗಳಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬಳಸಿರುವುದು ಇಡಿ ಸ್ತ್ರೀ ಕುಲಕ್ಕೆ ಮಾಡಿದ ಅವಮಾನವಾಗಿದೆ ಎಂದರು.

ರಾಜ್ಯದ ಕಾಂಗ್ರೆಸ್ ಸರ್ಕಾರವು ಎಂಎಲ್ಸಿ ಸಿ.ಟಿ ರವಿ ಅವರನ್ನು ಕಾನೂನು ಪ್ರಕಾರ ಬಂಧಿಸಿ ಬಿಡುಗಡೆ ಮಾಡಿದ್ದು ಸರಿಯಿದ್ದು ಬಿಜೆಪಿ ಕುಟುಂಬದ ಹೆಣ್ಣು ಮಕ್ಕಳಿಗೆ ಏನಾದರೂ ಈ ರೀತಿಯಲ್ಲಿ ಅವಮಾನ ಮಾಡಿದ್ದರೆ ಸುಮ್ಮನೆ ಇರತ್ತಾ ಇದ್ದರಾ ಕಾನೂನು ಎಲ್ಲರಿಗೂ ಒಂದೇ ಇದ್ದು ವಿನಾಕಾರಣ ಬಿಜೆಪಿ ಸರಕಾರದ ವಿರುದ್ದ ಆರೋಪಿಸಿದ್ದಾರೆ ಎಂದು ತಿಳಿಸಿದರು.

ಗೃಹ ಸಚಿವ ಅಮಿತ್ ಷಾ ಅವರು ಅಂಬೇಡ್ಕರ್ ಬಗ್ಗೆ ಮತ್ತು ಸಿ.ಟಿ.ರವಿ ಅವರು ಮಹಿಳೆಯ ಬಗ್ಗೆ ಹೇಳಿರುವುದು ಎಷ್ಟು ಸರಿ, ಹಾಗೆ ಹೆಣ್ಣು ಮಕ್ಕಳಿಗೆ ಸ್ವತಂತ್ರಯನ್ನು ಕೊಟ್ಟಂತವರ ಬಗ್ಗೆ ಅವಹೇಳನಕಾರಿ ಮಾತುಗಳನಾಡಿದ್ದು ಕೂಡ ಇಡೀ ಕಾಂಗ್ರೆಸ್ ಪಕ್ಷವು ವಿರೋಧಿಸುತ್ತದೆ ಕೂಡಲೇ ಅಮಿತಾ ಶಾ ಮತ್ತು ಸಿ.ಟಿ.ರವಿ ಅವರನ್ನು ಜನಪ್ರತಿನಿಧಿಯಾಗಿ ರಾಜೀನಾಮೆ ಕೊಡಿಸಿ ಕಾನೂನಿನ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮೈಲಾಂಡಹಳ್ಳಿ ಮುರಳಿ ಆಗ್ರಹಿಸಿದ್ದಾರೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

7 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

17 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago