ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) ಹಂತ-4 ರ ಯೋಜನೆಯಡಿಯಲ್ಲಿ ಸ್ಥಗಿತವಾಗಿರುವ ವಿವಿಧ ಕಾಮಗಾರಿಗಳು: ಕೂಡಲೇ ಕಾಮಗಾರಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಕಚೇರಿ ಎದರು ಕಪ್ಪು ಪಟ್ಟಿ ಧರಿಸಿ ಶಾಸಕ ಪ್ರತಿಭಟನೆ

ದೊಡ್ಡಬಳ್ಳಾಪುರ ನಗರಸಭೆಯ ವ್ಯಾಪ್ತಿಯಲ್ಲಿನ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) ಹಂತ-4 ರ ಯೋಜನೆಯಡಿಯಲ್ಲಿ ಸ್ಥಗಿತವಾಗಿರುವ ವಿವಿಧ ಕಾಮಗಾರಿಗಳನ್ನು ಶೀರ್ಘವಾಗಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಇಂದು ಶಾಸಕ ಧೀರಜ್ ಮುನಿರಾಜ್ ನೇತೃತ್ವದಲ್ಲಿ ನಗರಸಭೆ ಸದಸ್ಯರು ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಲಾಯಿತು.

ಎಲ್ಲಾ ಕಾಮಗಾರಿಗಳು ಮಂದಗತಿಯಲ್ಲಿ ಸಾಗುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತುಂಬಾ ಸಮಸ್ಯೆಯಾಗುತ್ತಿದೆ. ಜೊತೆಗೆ ಅವಧಿ ಮುಗಿದರು ಕಾಮಗಾರಿ ಪೂರ್ಣಗೊಂಡಿಲ್ಲ.  ಈ ಬಗ್ಗೆ ಕ್ರಮವಹಿಸುವಂತೆ ಒತ್ತಾಯಿಸಿ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಮನವಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಧೀರಜ್ ಮುನಿರಾಜ್, ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ 2023ರ ಫೆಬ್ರವರಿ ತಿಂಗಳಲ್ಲಿ  ಕಾಮಗಾರಿ ನಡೆಸಲು ಟೆಂಡರ್ ಅನುಮೋದನೆ ಆಗಿರುತ್ತದೆ. ಅಮೃತ ನಗರೋತ್ಥಾನ  ಹಂತ-4 ರ ಯೋಜನೆಯಡಿ ಸುಮಾರು 20 ಕೋಟಿ ವೆಚ್ಚದ ವಿವಿಧ ಕಾಮಗಾರಿ ನಡೆಸಲು ಒಬ್ಬ ವ್ಯಕ್ತಿಗೆ ಗುತ್ತಿಗೆ  ನೀಡಲಾಗಿರುತ್ತದೆ.  ಕಾಮಗಾರಿ ಪೂರ್ಣಗೊಳಿಸಲು 18 ತಿಂಗಳ ಅವಧಿ  ಸಮಯ ನಿಗದಿ ಮಾಡಲಾಗಿರುತ್ತದೆ. ಆದರೆ, ಅವಧಿ ಮುಗಿದರು ಸಹಾ ಯಾವುದೇ ಕಾಮಗಾರಿ ಪೂರ್ಣಗೊಂಡಿಲ್ಲ. ಈ ಬಗ್ಗೆ ಗುತ್ತಿಗೆದಾರ ಬಳಿ ಕೇಳಿದಾಗ, ಸರಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂಬ ನೆಪ ಹೇಳಿಕೊಂಡು ಕಾಮಗಾರಿ ಸ್ಥಗಿತ ಮಾಡಲಾಗಿದೆ. ಕಳೆದ ಜುಲೈ ತಿಂಗಳಲ್ಲಿ ನಡೆದ ಜಿಲ್ಲಾ ಮಟ್ಟದ ಕೆ.ಡಿ.ಪಿ ಸಭೆಯಲ್ಲಿ ಜಿಲ್ಲಾ ಉಸ್ಥುವಾರಿ ಸಚಿವ ಕೆ.ಎಚ್ ಮುನಿಯಪ್ಪ ಮತ್ತು ಜಿಲ್ಲಾಧಿಕಾರಿಗೆ ಕಾಮಗಾರಿ ವಿಳಂಬದ ಬಗ್ಗೆ ಗಮನಕ್ಕೆ ತರಲಾಗಿತ್ತು. ಸಕಾಲಕ್ಕೆ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರ ಉಪಯೋಗಕ್ಕೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಕಾಮಗಾರಿಯ ಕೈಗೊಂಡ ಸಮಯದಲ್ಲಿ ರಸ್ತೆಗಳನ್ನೆಲ್ಲಾ ಅಗೆದು ಕೇವಲ ವೆಟ್ ಮಿಕ್ಸ್ ಮಾತ್ರ ಹಾಕಲಾಗಿತ್ತು. ಮಳೆ ಬಂದರೆ  ರಸ್ತೆಗಳೆಲ್ಲ ಕೆಸರು ಗದ್ದೆಯಂತಾಗುತ್ತವೆ. ಬಿಸಿಲು ಬಂದರೆ ಧೂಳಿನಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಪರದಾಡುವಂತಾಗಿದೆ. ಜತೆಗೆ ನಗರದ ಪ್ರಮುಖ ರಸ್ತೆಗಳು ಡಾಂಬರೀಕರಣದ ಕಾಮಗಾರಿಯಲ್ಲಿ ಬರುವುದರಿಂದ ಗುತ್ತಿಗೆದಾರ ಈಗಾಗಲೇ ಕಾಮಗಾರಿ ಕೆಲಸ ಪ್ರಾರಂಭಿಸಿ ಅರೆಬರೆ ಕೆಲಸ ಮಾಡಿರುವುದರಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ. 1 ಕೋಟಿ 80 ಲಕ್ಷ ವೆಚ್ಚದ ಬೀದಿ ದೀಪಗಳು ಸಹಾ ಈ ಕಾಮಗಾರಿಯಲ್ಲಿ ಇದೆ. ಆದರೆ, ಗುತ್ತಿಗೆದಾರ ಯಾವುದೇ ಕೆಲಸಮಾಡಿಲ್ಲ. ಎಲ್ಲೂ ಬೀದಿದೀಪಗಳು ಅಳವಡಿಸಿಲ್ಲ. ಕಾಮಗಾರಿಗಳು ಮಂದಗತಿಯಲ್ಲಿ ನಡೆಯುತ್ತಿರುವುದರಿಂದ ಸಾರ್ವಜನಿಕರಿಗೆ ಉತ್ತರಿಸಲು ಸಾಧ್ಯವಾಗುತ್ತಿಲ್ಲ. ಈ ಕಾರಣ ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮನವಿ ಸಲ್ಲಿಸಲಾಗಿದೆ.

ನಗರ ಸಭಾ ಸದಸ್ಯ ಬಂತಿ ವೆಂಕಟೇಶ್ ಮಾತನಾಡಿ, ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಗಮನಕ್ಕೆ ತರಲಾಗಿದೆ. ಈ ಬಗ್ಗೆ ಗುತ್ತಿಗೆದಾರ ಕಾಮಗಾರಿಯ ಅನುದಾನದವನ್ನು ರಾಜ್ಯ ಸಕರಕಾರ ಬಿಡುಗಡೆ ಮಾಡಿಲ್ಲವೆಂದು ಉತ್ತರಿಸಿದ್ದಾರೆ. ಈ ಕುರಿತು ನಗರಸಭೆ ಆಡಳಿತಕ್ಕೆ ಹಾಗೂ ಶಾಸಕರ ಗಮನಕ್ಕೆ ತರಲಾಗಿತ್ತು. ಆದ್ದರಿಂದ ಕಾಮಗಾರಿ ಪೂರ್ಣಗೊಳಿಸವಂತೆ ಒತ್ತಾಯಿಸಿ ಇಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಮೌನ ಪ್ರತಿಭಟನೆ ನಡೆಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆನಂದ್, ಸದಸ್ಯರಾದ ಟಿ.ಎನ್ ಪ್ರಭುದೇವ್, ರವಿಕುಮಾರ್, ಪದ್ಮನಾಭ, ಆರ್ ಲಕ್ಷ್ಮಿಪತಿ, ಶಿವರಾಜ್, ಭಾಸ್ಕರ್, ನಾಗರತ್ನಾ, ಹಂಸಪ್ರಿಯಾ, ವತ್ಸಲಾ ಉಪಸ್ಥಿತರಿದ್ದರು.

Ramesh Babu

Journalist

Recent Posts

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

25 minutes ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

3 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

3 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

5 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

10 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

1 day ago