ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ ನಡೆದಿದೆ. ತಲೆಗೆ ನೇರವಾಗಿ ತಗುಲಬೇಕಿದ್ದ ಗುಂಡೇಟಿನಿಂದ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ.
ಬಟ್ಲರ್ ನ ಪೆನ್ಸಿಲ್ವೇನಿಯಾದಲ್ಲಿ ರ್ಯಾಲಿ ನಡೆಸುತ್ತಿದ್ದ ವೇಳೆ ಗುಂಡಿನ ದಾಳಿ ನಡೆದಿದ್ದು, ಗುಂಡು ಕಿವಿಗೆ ತಗುಲಿದ್ದರಿಂದ ಕಿವಿ ಹಾಗೂ ಮುಖದಲ್ಲಿ ರಕ್ತದ ಗುರುತು ಕಂಡುಬಂದಿದೆ. ಕೂಡಲೇ ಭದ್ರತಾ ಸಿಬ್ಬಂದಿ ರಕ್ಷಣೆ ಮಾಡಿ, ವೇದಿಕೆಯಿಂದ ಹೊರ ಕರೆದುಕೊಂಡುಬಂದಿದ್ದಾರೆ.
ರ್ಯಾಲಿ ವೇಳೆ ಬೃಹತ್ ಜನ ಸೇರಿದ್ದ ಮುಂಭಾಗದ ವೇದಿಕೆಯಲ್ಲಿದ್ದ ಟ್ರಂಪ್ ಮೇಲೆ ಗುಂಡಿನ ದಾಳಿಯಾಗಿದೆ. ಘಟನೆ ನಡೆದ ಕೂಡಲೆ ಪ್ರತಿರೋಧ ವ್ಯಕ್ತಪಡಿಸಿದ ಟ್ರಂಪ್, ಕೈ ಎತ್ತಿ ಮುಷ್ಠಿ ಹಿಡಿದು ಸಾರ್ವಜನಿಕರತ್ತ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ.
ನವೆಂಬರ್ ನಲ್ಲಿ ನಡೆಯಲಿರುವ ಅಮೇರಿಕ ಅಧ್ಯಕ್ಷೀಯ ಚುನಾವಣೆಯ ಪ್ರಚಾರ ಬಿರುಸು ಪಡೆದಿತ್ತು. ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಹಾಲಿ ಅಧ್ಯಕ್ಷ ಜೋ ಬೈಡನ್ ನಡುವೆ ತೀವ್ರ ಪೈಪೋಟಿಯೂ ಇದೆ. ಇಂತಹ ಸಂದರ್ಭದಲ್ಲಿ ಆಗಿರುವ ಟ್ರಂಪ್ ಮೇಲಿನ ಗುಂಡಿನ ದಾಳಿ ಅಮೆರಿಕ ದೇಶವನ್ನು ಬೆಚ್ಚಿ ಬೀಳಿಸಿದೆ.
ಶಂಕಿತ ಶೂಟರ್ ಸೇರಿ ಇಬ್ಬರು ಸಾವು:
ಶೂಟ್ ಮಾಡಿರುವ ಶಂಕಿತ ವ್ಯಕ್ತಿ ಸತ್ತಿದ್ದಾನೆ ಎಂದು ತಿಳಿದು ಬಂದಿದೆ. ಆತನ ಪಕ್ಕದಲ್ಲಿದ್ದ ಮತ್ತೊಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಒಟ್ಟು ಇಬ್ಬರು ಮೃತಪಟ್ಟಿದ್ದಾರೆ ಎಂದು ಯುಎಸ್ ಮಾಧ್ಯಮ ವರದಿ ಮಾಡಿದೆ.
ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…
ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…
ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…
ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…
ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…
ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…