ಅಮೆರಿಕದ ದಕ್ಷಿಣ ರಾಜ್ಯ ಮಿಸಿಸಿಪ್ಪಿಯಲ್ಲಿ ಬೀಸಿದ ಭೀಕರ ಸುಂಟರಗಾಳಿಗೆ ಅಪಾರ ನಷ್ಟ ಸಂಭವಿಸಿದ್ದು ಅಲ್ಲಿನ ನಿವಾಸಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸುಂಟರಗಾಳಿಗೆ ಕನಿಷ್ಠ 26 ಮಂದಿ ಮೃತಪಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಮಿಸ್ಸಿಸ್ಸಿಪ್ಪಿ ರಾಜ್ಯದಲ್ಲಿ ಸುಮಾರು 160 ಕಿಮೀ ವೇಗದಲ್ಲಿ ಬೀಸಿದ ಸುಂಟರಗಾಳಿ. ಭೀಕರ ಸುಂಟರಗಾಳಿಯಿಂದಾಗಿ ಅಪಾರ ಸಾವು ನೋವಿನ ಜೊತೆಗೆ, ಆಸ್ತಿಪಾಸ್ತಿ ನಷ್ಟವಾಗಿದೆ. ಈ ಹಿನ್ನೆಲೆ ಮಿಸಿಸಿಪ್ಪಿ ರಾಜ್ಯದ ಗವರ್ನರ್ ಟೇಟ್ ರೀವ್ಸ್ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ.
ಅಬ್ಬರದ ಚಂಡಮಾರುತದೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಭೀಕರ ಸುಂಟರಗಾಳಿಗೆ ಹಲವೆಡೆ ಕಟ್ಟಡಗಳು ಕುಸಿದು ಬಿದ್ದಿದ್ದು, ಮನೆಗಳ ಮೇಲ್ಛಾವಣಿ ಹಾರಿ ಹೋಗಿವೆ. ವಾಹನಗಳು ಜಖಂಗೊಂಡಿವೆ.
ಅಮೆರಿಕ ಅಧ್ಯಕ್ಷ ಜೋ ಬೈಡನ್ ಆಘಾತ ವ್ಯಕ್ತಪಡಿಸಿದ್ದು, ಜನರ ರಕ್ಷಣೆಗಾಗಿ ಎಲ್ಲ ರೀತಿಯ ನೆರವು ಹಾಗೂ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…