ಅಮೆರಿಕಾವು ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದ್ದು- ಸಿಎಂ ಸಿದ್ದರಾಮಯ್ಯ

ಅಮೆರಿಕಾವು ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದ್ದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕಾ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕಾ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ. ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ 30 ಜನರನ್ನು ಸಹ ವಾಪಸ್ಸು ಕರೆತರಲಾಗುವುದು. ದುಬೈ ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದರು.

ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ದುಬೈ ವಿಮಾನ ನಿಲ್ದಾಣ ಬಂದ್ ಮಾಡಲಾಗಿದ್ದು, ಅದನ್ನು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗುವುದು. ವಿಧಾನ ಪರಿಷತ್ ಸದಸ್ಯ ಭೋಜೇಗೌಡರು ದುಬೈನಲ್ಲಿದ್ದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಈ ವೇಳೆ ತಾವು ಹೋಟೆಲಿನಲ್ಲಿ ಸುರಕ್ಷಿತವಾಗಿರುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.

Ramesh Babu

Journalist

Recent Posts

Документ_9

Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…

2 hours ago

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ- ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…

9 hours ago

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

13 hours ago

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

23 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

1 day ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

1 day ago