ಕೋಲಾರ: ಅಮೇರಿಕಾ ದೇಶದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಅವರು ಭಾರತಕ್ಕೆ ಭೇಟಿ ನೀಡುವುದನ್ನು ವಿರೋಧಿಸಿ ನಗರದ ಕರ್ನಾಟಕ ಪ್ರಾಂತ ರೈತ ಸಂಘದ ಕಛೇರಿ ಮುಂದೆ ಸಂಘದ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ಡೊನಾಲ್ಡ್ ಟ್ರಂಪ್ ಭಾರತದ ವಿರುದ್ಧ ಸಾರಿರುವ ಸುಂಕ ಸಮರದ ಬೆದರಿಕೆ ಮೂಲಕ ಭಾರತದ ಕೃಷಿ, ಹೈನುಗಾರಿಕೆ, ಮೀನುಗಾರಿಕೆ, ಮಾರುಕಟ್ಟೆ, ಕೈಗಾರಿಕಾ ಬಿಡಿ ಉತ್ಪನ್ನಗಳನ್ನು ಆಮೇರಿಕಾ ದೇಶದ ಉತ್ಪನ್ನಗಳಿಗೆ ಸುಂಕ ರಹಿತವಾಗಿ ಮುಕ್ತಗೊಳಿಸುವಂತೆ ಒತ್ತಡ ಹಾಕುತ್ತಿದೆ. ಈ ಹಿನ್ನೆಲೆಯಲ್ಲಿ ಆಮೇರಿಕಾ ಉಪಾಧ್ಯಕ್ಷ ಭೇಟಿ ಮತ್ತು ವಾಣಿಜ್ಯ ಮಾತುಕತೆ ಭಾರತದ ಕೋಟ್ಯಾಂತರ ರೈತಾಪಿ ಸಮುದಾಯಕ್ಕೆ ಮರಣ ಶಾಸನವಾಗಲಿದೆ ಎಂದು ಆರೋಪಿಸಿದರು.
ದೇಶದಲ್ಲೇ ಎರಡನೆ ಅತಿ ದೊಡ್ಡ ಹಾಲು ಉತ್ಪಾದಕ ರಾಜ್ಯವಾಗಿರುವ ಕರ್ನಾಟಕದ ಸುಮಾರು ಹತ್ತಕ್ಕೂ ಹೆಚ್ಚು ಜಿಲ್ಲೆಗಳ ರೈತ ಕುಟುಂಬಗಳು ತಮ್ಮ ಜೀವನಾಧಾರಕ್ಕಾಗಿ ಹೈನುಗಾರಿಕೆಯನ್ನು ಅವಲಂಬಿಸಿವೆ ತರಕಾರಿ, ಮೀನುಗಾರಿಕೆ ಕೃಷಿಯನ್ನು ಅವಲಂಬಿಸಿದೆ. ಈ ಎಲ್ಲಾ ಕೃಷಿ ಉತ್ಪನ್ನಗಳು ಈಗಾಗಲೇ ಬೆಂಬಲ ಬೆಲೆ ಅಭಾವ ಮತ್ತು ಉತ್ಪಾದನಾ ವೆಚ್ಚದ ಹೆಚ್ಚಳದಿಂದ ಕಷ್ಟ ಹಾಗೂ ನಷ್ಟವನ್ನು ಅನುಭವಿಸುತ್ತಿವೆ. ಇಂತಹ ಸಂದರ್ಭದಲ್ಲಿ ಈ ವಲಯಗಳು ಸೇರಿದಂತೆ ವಿವಿಧ ರೀತಿಯ ತೋಟಾಗಾರಿಕೆ ಉತ್ಪನ್ನಗಳ ಸುಂಕ ರಹಿತ ಅಮದು ಈ ಎಲ್ಲಾ ರೈತರನ್ನು ಸಂಪೂರ್ಣವಾಗಿ ದಿವಾಳಿಯೆಬ್ಬಿಸಿ ರಾಜ್ಯದ ರೈತರನ್ನು ನಿರುದ್ಯೋಗ-ಸಾಲಭಾಧೆಗೆ ಸಿಲುಕಿಸಲಿದೆ ಎಂದರು.
ಕೆಲವೇ ಕೆಲವು ದೊಡ್ಡ ಉದ್ಯಮಿಗಳ ರಪ್ತು ವ್ಯವಹಾರಕ್ಕಾಗಿ, ಬಹುರಾಷ್ಟ್ರೀಯ ಕಂಪನಿಗಳ ಹಿತಾಸಕ್ತಿಗಾಗಿ ಕೋಟ್ಯಾಂತರ ರೈತರ ಜೀವನೋಪಾಯ ಸರ್ವನಾಶ ಮಾಡುವ ಮಾತುಕತೆಗಳು ಆಹಾರ ಭದ್ರತೆ, ಆಹಾರ ಸ್ವಾವಲಂಬನೆ ಅಂತಿಮವಾಗಿ ದೇಶದ ಸಾರ್ವಭೌಮತ್ವ ವನ್ನು ಅಪಾಯಕಾರಿ ಪರಿಸ್ಥಿತಿಗೆ ಕೊಂಡೊಯ್ಯಲಿದೆ. ವಾನ್ಸ್ ಭೇಟಿ ಹಿನ್ನೆಲೆಯಲ್ಲಿ ಆಮೇರಿಕಾ ವಾಣಿಜ್ಯ ಕಾರ್ಯದರ್ಶಿ ಹೋವರ್ಡ್ ಲುಟ್ನಿಕ್ ರವರು ಕೃಷಿ ಮಾರುಕಟ್ಟೆ ಮುಕ್ತಗೊಳಿಸುವುದೇ ಭಾರತದ ಮಾತುಕತೆಯಲ್ಲಿ ಪ್ರಮುಖ ಅಧ್ಯತಾ ವಿಷಯವಾಗಿದ್ದು ಯಾವುದೇ ಸುಂಕ ಹಾಗೂ ಇತರೆ ತಡೆಗಳನ್ನು ನಿವಾರಿಸಬೇಕು ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಅದ್ದರಿಂದ ಆಮೇರಿಕಾ ಉಪಾಧ್ಯಕ್ಷ ಜೊತೆ ವಾಣಿಜ್ಯ ಮಾತುಕತೆಗಳನ್ನು ರದ್ದುಪಡಿಸಬೇಕು. ಆಮೇರಿಕಾದ ಸುಂಕ ಸಮರದಿಂದ ಉಂಟಾಗುವ ಪರಿಸ್ಥಿತಿಯನ್ನು ನಿಭಾಯಿಸಲು ಕೂಡಲೇ ಸಂಸತ್ತು ಹಾಗೂ ಶಾಸನಸಭೆಗಳಲ್ಲಿ ಚರ್ಚಿಸಿ ಸೂಕ್ತ ಮಾರ್ಗೋಪಾಯಗಳನ್ನು ಕೈಗೊಳ್ಳಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಆಗ್ರಹಿಸಿದರು.
ಈ ಪ್ರತಿಭಟನೆ ನೇತೃತ್ವವನ್ನು ಪ್ರಾಂತ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಅಲಹಳ್ಳಿ ವೆಂಕಟೇಶಪ್ಪ, ಉಪಾಧ್ಯಕ್ಷರಾದ ಎನ್.ಎನ್.ಶ್ರೀರಾಮ್, ಗಂಗಮ್ಮ, ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ಶ್ರೀಧರ್ ರೆಡ್ಡಿ, ವಿರೇಗೌಡ, ನಾರಾಯಣಸ್ವಾಮಿ, ರಾಜೇಂದ್ರಪ್ರಸಾದ್, ನೀಲಮ್ಮ, ಸರೋಜಮ್ಮ, ನಾರಾಯಣಪ್ಪ, ವಿಜಯಕೃಷ್ಣ, ಎಂ.ಭೀಮರಾಜ್ ಮುಂತಾದವರು ಇದ್ದರು.
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…