ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ತಾಲೂಕಿನ ತೂಬಗೆರೆ ಶ್ರೀಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ರಾಮ ಭಕ್ತರು ಸೀತಾರಾಮ ಕಲ್ಯಾಣೋತ್ಸವ ನೆರವೇರಿಸಿದರು.ದೇವಾಲಯದ ಮುಂಭಾಗ ಶ್ರೀರಾಮ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ, ಭಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಹಾಗೂ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಹೋಬಳಿ ಕೇಂದ್ರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬಸ್ ನಿಲ್ದಾಣದಲ್ಲಿ ಶ್ರೀರಾಮ ಭಾವಚಿತ್ರಕ್ಕೆ ವಿಶೇಷ ಪೂಜೆ ನೆರವೇರಿಸಿ, ಭಕ್ತರಿಗೆ ಪಾನಕ,ಮಜ್ಜಿಗೆ ಹಾಗೂ ಕೋಸಂಬರಿ ವಿತರಣೆ ಮಾಡಲಾಗಿದೆ. ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಶ್ರೀತಾಮ ಕಲ್ಯಾಣೋತ್ಸವ ಜರುಗಿಸಲಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ಪ್ರತಾಪ್ ತಿಳಿಸಿದರು.
ಬಿಜೆಪಿ ಮುಖಂಡ ಕೃಷ್ಣಪ್ಪ(ಕಿಟ್ಟಿ) ಮಾತನಾಡಿ, ಪ್ರತಿಯೊಬ್ಬರಲ್ಲೂ ಶ್ರೀರಾಮನ ಸಂಭ್ರಮವು ಮನೆ ಮಾಡಿದೆ. ನಮ್ಮ ರಾಮ ನಮ್ಮ ಮನೆಗೆ ಬಂದಿದ್ದಾರೆಂಬ ಭಾವನೆ ಜನರಲ್ಲಿದೆ. ಈ ಮೂಲಕ ಎಲ್ಲರ ಮನೆ ಮನಗಳಲ್ಲಿ ರಾಮ ವಿಜೃಂಭಿಸುತ್ತಿದ್ದಾನೆ. ಕಳೆದ 500 ವರ್ಷಗಳಿಂದ ಮಾಡಿದ ಹೋರಾಟವು ಇವತ್ತು ಸಾರ್ಥಕವಾಗಿದೆ ಎಂದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…