Categories: ರಾಜ್ಯ

ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮ: ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ವಹಿಸಲು ಪೊಲೀಸರಿಗೆ ಸೂಚಿಸಿದ ಸಿಎಂ

ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈಗಾಗಲೇ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಮಾಯಕ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಸುದ್ದಿಗಳು ಕಿವಿಗೆ ಬಿದ್ದ ತಕ್ಷಣ ಆತುರಕ್ಕೆ ಬಿದ್ದು ಆವೇಶಕ್ಕೆ ಒಳಗಾಗದೆ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು. ಯಾವುದೇ ಕಾರಣಕ್ಕೂ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳುವ ಅಧಿಕಪ್ರಸಂಗತನವನ್ನು ಮಾಡಬಾರದು ಎಂದು ಎಚ್ಚರಿಸಿದ್ದಾರೆ.

ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಕಾಂಗ್ರೆಸ್ ಸರ್ಕಾರ ಹೊಣೆಯಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಹೇಳಿಕೆಯಲ್ಲಿ ಶಾಂತಿ ಕಾಪಾಡಿಕೊಂಡು ಬರಬೇಕೆಂಬ ಸದಾಶಯಕ್ಕಿಂತ ಹೆಚ್ಚಾಗಿ ಬೆದರಿಕೆ ಮತ್ತು ಪ್ರಚೋದನೆಯ ದನಿ ಇದೆ. ಸರ್ಕಾರಕ್ಕೆ ಅದರ ಕರ್ತವ್ಯದ ಅರಿವಿದೆ. ತಪ್ಪು ನಡೆದರೆ ಕಾನೂನು ಅದರ ಕೆಲಸ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಬಿಜೆಪಿಯ ಕೆಲವು ಶಾಸಕರು, ಸಂಸದರು ಈಗಾಗಲೇ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ರಾಜ್ಯ ಸರ್ಕಾರ ಗಮನಿಸಿದೆ. ಇಂತಹವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರು ಕಠಿಣ ಕ್ರಮಗಳನ್ನು ಕೈಗೊಂಡರೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸರ್ಕಾರದ ಕೆಲಸ ಸುಲಭವಾಗುತ್ತದೆ ಎಂದು ಹೇಳಿದ್ದಾರೆ.

ದೇವರು – ಧರ್ಮ – ಪೂಜೆ – ಆರಾಧನೆಗಳೆಲ್ಲ ವೈಯಕ್ತಿಕವಾದುದು. ಇದನ್ನು ವೈಯಕ್ತಿಕ ಮಟ್ಟದಲ್ಲಿಯೇ ಉಳಿಸಿಕೊಂಡರೆ ದೇವರು – ಧರ್ಮ ಎಲ್ಲರಿಗೂ ಗೌರವ ಮತ್ತು ಸಮಾಜಕ್ಕೂ ಕ್ಷೇಮ. ಇದು ಎಲ್ಲ ಧರ್ಮಾನುಯಾಯಿಗಳಿಗೂ ಅನ್ವಯಿಸುತ್ತದೆ ಎಂದಿದ್ದಾರೆ.

Ramesh Babu

Journalist

Recent Posts

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

3 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

4 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

4 hours ago

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

11 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

22 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

1 day ago