ಅಯೋಧ್ಯೆ ರಾಮನ ದರ್ಶನಕ್ಕೆ ಪಯಣ ಬೆಳೆಸಿದ “ಬಸಪ್ಪ”

ತಾಲೂಕಿನ ಪೆರಮಗೊಂಡನಹಳ್ಳಿ ಗ್ರಾಮದಲ್ಲಿರುವ ದಿನ್ನೆ ಆಂಜನೇಯಸ್ವಾಮಿ ದೇವಾಲಯದಿಂದ ಆಯೋಧ್ಯೆ ರಾಮನ‌ ದರ್ಶನ ಪಡೆಯಲು ಬಸಪ್ಪ ಎಂದೇ ಹೆಸರು ಪಡೆದಿರುವ ಎತ್ತು ಸೆ.19ರ ಗುರುವಾರದಂದು ಪಯಣ ಬೆಳೆಸಿತು.

ದೊಡ್ಡಬಳ್ಳಾಪುರದಿಂದ ಉತ್ತರ ಪ್ರದೇಶದ ಅಯೋಧ್ಯೆಗೆ ಸುಮರು 2ಸಾವಿರ ಕಿಲೋ ಮೀಟರ್ ದೂರವಿದ್ದು, ಅಷ್ಟು ದೂರ ಹಗಲು ರಾತ್ರಿ ಎನ್ನದೇ ರಾಮನ ದರ್ಶನ ಪಡೆಯಲು ಬಸಪ್ಪ ಪಯಣ ಬೆಳೆಸಿದೆ.

ಬಸಪ್ಪನ ಪ್ರಯಾಣಕ್ಕಾಗಿಯೇ ಪ್ರತ್ಯೇಕವಾಗಿ ಬಸ್ಸೊಂದನ್ನು ತಯಾರು ಮಾಡಿಸಲಾಗಿದೆ. ಬಸಪ್ಪನಿಗೆ ಮರ್ಯಾದಾ ಪುರುಷ ರಾಮನ ದರ್ಶನ ಮಾಡಿಸಲು ವಾಸುದೇವಾ ಚಾರ್ ಅವರು ಜವಾಬ್ದಾರಿ ಹೊತ್ತಿದ್ದು, ಕಳೆದು ಒಂದು ವರ್ಷದಿಂದ ಸಕಲ ಸಿದ್ಧತೆ ನಡೆಸಲಾಗಿದೆ ಎನ್ನಲಾಗಿದೆ.

ನಿನ್ನೆ (ಸೆ.19) ದಿನ್ನೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಾಸುದೇವಾ ಚಾರ್ ನೇತೃತ್ವದಲ್ಲಿ ಎಲ್ಲಾ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ ಬಸಪ್ಪನ ಯಾತ್ರೆಗೆ ಚಾಲನೆ ನೀಡಲಾಯಿತು.

ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ವಾಸುದೇವಾ ಚಾರ್, ಇದೇ ಮೊದಲ ಬಾರಿಗೆ ಅಯೋಧ್ಯೆ ರಾಮನ ದರ್ಶನಕ್ಕಾಗಿ ದಿನ್ನೆ ಆಂಜನೇಯ ಸ್ವಾಮಿಯ ಪ್ರತ್ಯಂಗಿರ ಮಹಾಕಾಳಿ ಬಸಪ್ಪ‌ ಎಂಬ ಹೆಸರಿನಲ್ಲಿರುವ ಎತ್ತು ಹೊರಟಿದೆ. ಅದೇರೀತಿ ರಾಮಸೇತು ಕಲ್ಲು ಸಹ ಜೊತೆಯಲ್ಲಿ ಇರಲಿದೆ. ಅಯೋಧ್ಯೆಯ ಗಂಗಾ ನದಿಯಲ್ಲಿ ಬಸಪ್ಪನಿಗೆ ಗಂಗಾ ಸ್ನಾನ ಮಾಡಿಸಿ ರಾಮನ ದರ್ಶನ ಮಾಡಿಸಲಾಗುವುದು. ಇದಕ್ಕೆ ಸಕಲ ಸಿದ್ಧತೆ ನಡೆಸಲಾಗಿದೆ ಎಂದು ಹೇಳಿದರು.

ರಾಮನ ದರ್ಶನ ನಂತರ ಕಾಶಿ ವಿಶ್ವೇಶ್ವರ ಸನ್ನಿಧಿ, ವರಾಹಿ, ರಾಮಜನ್ಮಭೂಮಿ, ಗಂಡಕ್ಕಿ ನದಿ, ಗಯಾ ಸೇರಿದಂತೆ ಇನ್ನಿತರ ಪುಣ್ಯಕ್ಷೇತ್ರಗಳಿಗೆ ಭೇಟಿ‌ ನೀಡಲಾಗುವುದು ಎಂದರು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

15 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

1 day ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

2 days ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

2 days ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago