ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಹಲವು ವಿಘ್ನಗಳೂ ಎದುರಾಗಿವೆ. ತಾಲೂಕಿನ ಹಲವು ಗ್ರಾಮಗಳಲ್ಲಿ ಸಮಸ್ಯೆ ಮುಂದಿಟ್ಟುಕೊಂಡು ಚುನಾವಣೆ ಬಹಿಷ್ಕರಿಸಲು ಗ್ರಾಮಸ್ಥರು ತೀರ್ಮಾನಿಸಿದ್ದಾರೆ.
ಕಂದಾಯ ಗ್ರಾಮ ಘೋಷಣೆ, ಒಳ ಮೀಸಲಾತಿ ರದ್ದು, ಅರಣ್ಯ ಇಲಾಖೆ ಕಿರುಕುಳ ತಾಲೂಕಿನ ಕೆಳಗಿನನಾಯಕರಾಂಡಹಳ್ಳಿ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದರು.
ಶನಿವಾರ ಗ್ರಾಮದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಗ್ರಾಮದ ಮುಖಂಡರು, ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದ ಹೊರತು ಮತದಾನ ಮಾಡುವುದಿಲ್ಲ ಎಂದು ಘೋಷಿಸಿದರು.
ಗ್ರಾಮಸ್ಥರ ಬೇಡಿಕೆಗಳೇನು..?
1.ಕೆಳಗಿನನಾಯಕರಾಂಡನಹಳ್ಳಿ ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ ಘೋಷಿಸುವುದು.
2. ಗೋಮಾಳ ಭೂಮಿಯಲ್ಲಿ ದಶಕಗಳಿಂದ ಉಳುಮೆ ಮಾಡುತ್ತಿರುವ ರೈತರ ಹೆಸರಿಗೆ ಖಾತೆ ಮಾಡಿಸುವುದು.
3. ಅರಣ್ಯ ಇಲಾಖೆಯು ರೈತರಿಗೆ ನೀಡುತ್ತಿರುವ ಕಿರುಕುಳದಿಂದ ಮುಕ್ತಿಗೊಳಿಸಬೇಕು.
4. ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವ ಒಳ ಮೀಸಲಾತಿ ಹಿಂಪಡೆಯುವಂತೆ ಒತ್ತಾಯ
5. ರೈತರ ಮೇಲೆ ಹಾಕಿರುವ ಕ್ರಿಮಿನಲ್ ಮೊಕದ್ದಮೆ ವಾಪಸ್ ಪಡೆಯಬೇಕು
6. ಗ್ರಾಮಕ್ಕೆ ಇನ್ನೂ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹ.
ಗ್ರಾಮದಲ್ಲಿ ಒಟ್ಟು 140 ಮನೆ, 900 ಜನಸಂಖ್ಯೆ , 486 ಮತದಾರರು ಇದ್ದು, ನಾವು ಯಾರೂ ಮತ ಹಾಕೋದಿಲ್ಲ. ನಮಗೆ ತುಂಬಾ ಅನ್ಯಾಯ ಆಗಿದೆ ಅವಕಾಶ ವಂಚಿತರಾಗಿದ್ದೇವೆ. ಅಲೆಮಾರಿಗಳು ಎಂದು ಕುಂಟುನೆಪದಿಂದ ನಮ್ಮನ್ನು ಎಲ್ಲಾ ರೀತಿಯಲ್ಲಿ ಕಡೆಗಣಿಸಲಾಗಿದೆ, ನಮ್ಮ ಬೇಡಿಕೆಗಳು ಈಡೇರುವವರಿಗೆ ಮತದಾನ ಬಹಿಷ್ಕಾರ ಮಾಡುತ್ತೇವೆ. ನಮ್ಮ ಊರಿಗೆ ಮತಪೆಟ್ಟಿಗೆ ತರಲು ಬಿಡೋದಿಲ್ಲ ಎಂದು ಘಂಟಾಘೋಷವಾಗಿ ತಿಳಿಸಿದರು.
1951-52, 1983-84, 1994-95ನೇ ಇಸವಿಗಳಲ್ಲಿ ಅಂಗೈ ಅಗಲದಷ್ಟು ಗೋಮಾಳ ಜಮೀನನ್ನು ನಮ್ಮ ಹೆಸರಿಗೆ ಖಾತೆ ಮಾಡಿಕೊಡಲಾಗಿತ್ತು. ಅದರಲ್ಲಿ ನಾವು ಉತ್ತು ಬಿತ್ತು ಜೀವನ ನಡೆಸುತ್ತಿದ್ದೆವು. ಇನ್ನೂ ಕೆಲವರು ನಮೂನೆ 57, ನಮೂನೆ 53 ಅರ್ಜಿ ಹಾಕಿ ಉಳುಮೆ ಮಾಡುತ್ತಿದ್ದಾರೆ. ಈಗ ಏಕಾಏಕಿ ಅರಣ್ಯ ಇಲಾಖೆ ಬಂದು ಈ ಭೂಮಿ ಅರಣ್ಯ ಇಲಾಖೆಗೆ ಒಳಪಟ್ಟಿದೆ ಎಂದು ಟ್ರಂಚ್ ಹೊಡೆಯಲು ಮುಂದಾಗಿ ನಮಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದರು.
ಈ ವೇಳೆ ಸರ್ಕಾರ, ಅರಣ್ಯ ಇಲಾಖಾಧಿಕಾರಿಗಳ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಊರಿನ ಗ್ರಾಮಸ್ಥರು.
ದೊಡ್ಡಬಳ್ಳಾಪುರ ತಾಲೂಕು ಛಲವಾದಿ ಮಹಾಸಭಾ ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…