Categories: ಕೋಲಾರ

ಅರಣ್ಯ ಸಂರಕ್ಷಣೆಗೆ ಇಲಾಖೆಯ ಸಿಬ್ಬಂದಿಯ ಸೇವೆ ಅನನ್ಯವಾದದ್ದು-ನ್ಯಾ. ಮಂಜುನಾಥ್

ಕೋಲಾರ: ಗಡಿಯಲ್ಲಿ ಯೋಧರು ದೇಶವನ್ನು ರಕ್ಷಣೆ ಮಾಡಿದರೆ ದೇಶದ ಒಳಗಿರುವ ಅರಣ್ಯ ಸಂಪತ್ತನ್ನು ಸಂರಕ್ಷಿಸುವ ಮಹತ್ವದ ಕಾರ್ಯವನ್ನು ಅರಣ್ಯ ಇಲಾಖೆ ಸಿಬ್ಬಂದಿ ವಹಿಸಿದ್ದಾರೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಎ ಮಂಜುನಾಥ ತಿಳಿಸಿದರು.

ನಗರದ ಹೊರವಲಯದ ಗಾಜಲದಿನ್ನೆ ಅರಣ್ಯ ವಿಭಾಗ ಕಛೇರಿಯ ಆವರಣದಲ್ಲಿ ಬುಧವಾರ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ ಗೌರವ ಸಲ್ಲಿಸಿ ಮಾತನಾಡಿದ ಅವರು ಇಂದಿನ ದಿನಗಳಲ್ಲಿ ಪ್ರಾಣಿ ಮತ್ತು ಮಾನವನ ನಡುವಿನ ಸಂಘರ್ಷಗಳ ನಡುವೆ ಅರಣ್ಯವನ್ನು ನಾಶ ಮಾಡಲು ಹೊರಟಿದ್ದಾರೆ ಇದರೊಂದಿಗೆ ಪ್ರಕೃತಿ ವಿಕೋಪ ಮತ್ತು ದರೋಡೆಕೋರ ಮಧ್ಯೆ ಸೆಣಸಾಟದಿಂದ ಅರಣ್ಯ ಇಲಾಖೆಯ ಸಿಬ್ಬಂದಿ ಬಲಿಯಾಗುತ್ತಾ ಇದ್ದಾರೆ ಅವರ ಪ್ರಾಣ ತ್ಯಾಗಕ್ಕೆ ಅವರ ಕುಟುಂಬಗಳಿಗೆ ಶಾಂತಿ ಮತ್ತು ಭವಿಷ್ಯ ರೂಪಿಸುವಂತಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ ಮಾತನಾಡಿ ಅರಣ್ಯವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಕರ್ತವ್ಯವಾಗಬೇಕು ಅರಣ್ಯ ಸಂಪತ್ತು ದೇಶದ ಸಮೃದ್ಧಿಯ ಸಂಕೇತವಾಗಿದೆ ಅರಣ್ಯವನ್ನು ಸಂರಕ್ಷಿಸುವುದರಿಂದ ಮಾತ್ರವೇ ಮುಂದಿನ ಜನಾಂಗಕ್ಕೆ ಉತ್ತಮ ಭವಿಷ್ಯವನ್ನು ನೀಡಲು ಸಾಧ್ಯವಾಗುತ್ತದೆ ಅರಣ್ಯ ಸಂರಕ್ಷಣೆಗಾಗಿ ತಮ್ಮ ಪ್ರಾಣಿಗಳನ್ನು ಕೊಟ್ಟ ಮಹನೀಯರ ತ್ಯಾಗವು ವ್ಯರ್ಥವಾಗಬಾರದು ಎಂದರು.

ಕೋಲಾರ ಜಿಲ್ಲೆಯಲ್ಲಿ ಇತ್ತಿಚೆಗೆ ಸುಮಾರು 2850 ಎಕರೆಗಳಷ್ಟು ಅರಣ್ಯ ಭೂಮಿಯನ್ನು ಉಳಿಸಿದ್ದು ಭಾರತ ದೇಶದ ಇತಿಹಾಸದಲ್ಲೇ ದೊಡ್ಡ ಮಟ್ಟದ ದಾಖಲೆಯಾಗಿದೆ ಜಿಲ್ಲೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ಏಡುಕೊಂಡಲು ಅವರ ಧೈರ್ಯವನ್ನು ಇತರೆ ಅಧಿಕಾರಿಗಳಿಗೆ ಸ್ಪೂರ್ತಿ ಮತ್ತು ಮಾದರಿಯಾಗಬೇಕು ಇವರ ಸೇವೆಯನ್ನು ಸರಕಾರವು ಗುರುತಿಸಬೇಕಾಗಿದೆ ಭಯ ಮತ್ತು ಒತ್ತಡಕ್ಕೆ ಮಣಿಯದೇ ತಮ್ಮ ಕೆಲಸವನ್ನು ಮುಂದುವರೆಸಲು ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಲಾಗುತ್ತದೆ ಎಂದರು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಮಾತನಾಡಿ ಅರಣ್ಯ ಇಲಾಖೆ ಹುತಾತ್ಮ ಸಿಬ್ಬಂದಿಯ ನೋವು ನಮ್ಮ ಪೋಲಿಸ್ ಇಲಾಖೆಯಲ್ಲಿ ಕೂಡ ಇದೆ
ಅರಣ್ಯ ಸಂರಕ್ಷಣೆಯು ನಮ್ಮೆಲ್ಲರ ಬದ್ದತೆಯನ್ನು ಹೆಚ್ಚಿಸುತ್ತದೆ ಹುತಾತ್ಮರ ಕುಟುಂಬದೊಂದಿಗೆ ಇಲಾಖೆಗಳು ಸದಾ ಇರುತ್ತದೆ ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಮಾತ್ರವೇ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ ಅದಕ್ಕೆ ಕೋಲಾರದಲ್ಲಿ ಒತ್ತುವರಿ ತೆರೆವು ಉದಾಹರಣೆಯಾಗಿದೆ ಅರಣ್ಯ ಇಲಾಖೆಯು ಒತ್ತುವರಿ ಭೂಮಿಯನ್ನು ಜಿಲ್ಲಾಡಳಿತಕ್ಕೆ ಕೊಡುಗೆಯಾಗಿ ನೀಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ಏಡುಕೊಂಡಲು ಮಾತನಾಡಿ ಪ್ರತಿ ವರ್ಷವೂ ಅರಣ್ಯ ಇಲಾಖೆಯ ಸಿಬ್ಬಂದಿ ಕರ್ತವ್ಯದಲ್ಲಿದ್ದಾಗಲೇ ಮೃತಪಡುತ್ತಿದ್ದಾರೆ. ಅವರ ಸೇವೆಯನ್ನು ನಾವು ಸ್ಮರಿಸಬೇಕು. ಆ ಉದ್ದೇಶಕ್ಕಾಗಿ ರಾಷ್ಟ್ರೀಯವಾಗಿ ಹುತಾತ್ಮರ ದಿನ ಆಚರಿಸುತ್ತಿರುವುದು ಒಳ್ಳೆಯ ಕೆಲಸವಾಗಿದೆ ಸುಮಾರು 61 ಸಿಬ್ಬಂದಿ ರಾಜ್ಯದಲ್ಲಿ ಹುತಾತ್ಮರಾಗಿದ್ದಾರೆ ಅವರ ಸೇವೆ ಇನ್ನೂ ಇಲಾಖೆಗೆ ಅಗತ್ಯವಾಗಿತ್ತು ಎಂದು ಸ್ಮರಿಸಿದರು.

ಇದೇ ಸಂದರ್ಭದಲ್ಲಿ ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಶ್ರೀನಿವಾಸ್ ಎಸ್ ಪಾಟೀಲ್, ಒಂದನೇ ಅಧಿಕ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಚೇತನಾ ಅರಿಕಟ್ಟೆ, ಸಾಮಾಜಿಕ ಅರಣ್ಯಾಧಿಕಾರಿ ಆನಂದ್ ಕುಮಾರ್, ವೇದಿಕೆಯಲ್ಲಿ ಇದ್ದು ಕೋಲಾರ ಪ್ರಾದೇಶಿಕ ಉಪ ವಲಯ ಅರಣ್ಯಾಧಿಕಾರಿ ಬಿ.ಮಂಜುನಾಥ್ ಕಾರ್ಯಕ್ರಮವನ್ನು ನಿರೂಪಿಸಿದರು, ಅತಿಥಿಗಳು ಹುತಾತ್ಮ ಸ್ಮಾರಕಕ್ಕೆ ಪುಷ್ಪ ಗುಚ್ಚ ಅರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ಪೊಲೀಸ್ ತಂಡದಿಂದ ಹುತಾತ್ಮರ ಸ್ಮರಣಾರ್ಥ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಲಾಯಿತು.

Ramesh Babu

Journalist

Recent Posts

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

38 minutes ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 hour ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

3 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

8 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

22 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago