ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಮೇ 22ರವರೆಗೆ ಮಳೆಯಾಗುವ ನಿರೀಕ್ಷೆಯಿದ್ದು, ಗಂಟೆಗೆ ಗಾಳಿ 40ರಿಂದ 50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಹಾಸನ, ಕೊಡಗು, ಬೆಳಗಾವಿ, ಬೀದರ್, ರಾಯಚೂರು, ಯಾದಗಿರಿ, ದಾವಣಗೆರೆ, ಚಿತ್ರದುರ್ಗ ಮುಂತಾದ ಸ್ಥಳಗಳಲ್ಲಿ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಇನ್ನೂ ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…