ಅರಳುಮಲ್ಲಿಗೆ ಕೆರೆ ಏರಿ ಮೇಲೆ ಸಿಮೆಂಟ್ ಲಾರಿ ಹಾಗೂ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ನಡುವೆ ಅಪಘಾತ: ಓರ್ವನಿಗೆ ಗಾಯ

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಸಿಮೆಂಟ್ ಲಾರಿ ಹಾಗೂ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ನಡುವೆ ಅಪಘಾತ ನಡೆದಿದ್ದು, ಓರ್ವನಿಗೆ ಗಾಯಗಳಾಗಿವೆ.

ಸಿಮೆಂಟ್ ಲಾರಿಯು ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದು ಸ್ಥಳದಿಂದ ಸಿಮೆಂಟ್ ಲಾರಿ ಡ್ರೈವರ್ ಎಸ್ಕೇಪ್ ಆಗಿದ್ದಾನೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..

ಕೆರೆ ಏರಿ ಮೇಲೆ‌‌ ಸದಾ ಒಂದಿಲ್ಲೊಂದು ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಭಾರೀ ಗಾತ್ರದ ವಾಹನಗಳು ಸುಗಮವಾಗಿ ಚಲಿಸಲು ಹರಸಾಹಸಪಡುವಂತಾಗಿದ್ದು, ಇದಕ್ಕೆ ಸಂಬಂಧಪಟ್ಟ ಇಲಾಖೆ ರಸ್ತೆ ಅಗಲೀಕರಣ ಸೇರಿದಂತೆ ಅಪಘಾತ ಸಂಭವಿಸದಂತಹ ಯಾವ ಉಪಕ್ರಮಗಳನ್ನು ಅಳವಡಿಸಿಲ್ಲ ಎಂದು ಅರಳುಮಲ್ಲಿಗೆ ಗ್ರಾಮಸ್ಥರು ಆರೋಪಿಸಿದ್ದಾರೆ..

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ‌.

Leave a Reply

Your email address will not be published. Required fields are marked *

error: Content is protected !!