
ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಎರಡು ಕ್ಯಾಂಟರ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಇಂದು ಬೆಳಗ್ಗೆ ಸುಮಾರು 8 ಗಂಟೆಯಲ್ಲಿ ನಡೆದಿದೆ.
ಕೆರೆ ಏರಿ ಮೇಲೆ ತಿರುವಿನಲ್ಲಿ ಭಾರೀ ಗಾತ್ರದ ಎರಡು ಕ್ಯಾಂಟರ್ ಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡಿವೆ ಡಿಕ್ಕಿ ರಭಸಕ್ಕೆ ಕ್ಯಾಂಟರ್ ಗಳ ಮುಂಭಾಗ ಫುಲ್ ಜಖಂಗೊಂಡಿವೆ. ಘಟನೆಯಲ್ಲಿ ಚಾಲಕರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ…
ಅಪಘಾತಕ್ಕೊಳಗಾದ ಕ್ಯಾಂಟರ್ ಗಳು ರಸ್ತೆ ಮಧ್ಯೆಯೆ ಇರುವುದರಿಂದ ಕೆರೆ ಏರಿ ಮೇಲೆ ಫುಲ್ ಟ್ರಾಫಿಕ್ ಜಾಮ್ ಉಂಟಾಗಿ ನೆಲಮಂಗಲ, ಮಧುರೆ ಹಾಗೂ ದೊಡ್ಡಬಳ್ಳಾಪುರಕ್ಕೆ ಬರುವ ಹೋಗುವ ವಾಹನ ಸವಾರರು ಪರದಾಡುತ್ತಿದ್ದಾರೆ….
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…..