ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಅಶೋಕ್ ಲೇಲ್ಯಾಂಡ್ ಪಲ್ಟಿಯಾಗಿ, ಜಖಂಗೊಂಡಿದೆ.

ಘಟನೆಯಲ್ಲಿ ವಾಹನಗಳ ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದರೆ ಅಶೋಕ್ ಲೇಲ್ಯಾಂಡ್ ರಸ್ತೆಯಲ್ಲೇ ಪಲ್ಟಿಯಾಗಿ ಬಿದ್ದಿದ್ದರಿಂದ, ಕೆಲಕಾಲ ಸಂಚಾರಕ್ಕೂ ಅಡಚಣೆ ಉಂಟಾಯಿತು. ಮಾಹಿತಿ ತಿಳಿದು ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅರಳುಮಲ್ಲಿಗೆ ಕೆರೆ ಏರಿ ರಸ್ತೆ ಕಿರಿದಾಗಿರುವುದರಿಂದ ಇಲ್ಲಿ ಪದೇಪದೇ ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಭಾರೀ ಗಾತ್ರದ ವಾಹನಗಳ ಸಂಚಾರ, ಅತಿವೇಗದಲ್ಲಿ ಸಂಚರಿಸುವ ಕಾರು ಹಾಗೂ ಬೈಕ್‌ಗಳ ಕಾರಣ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಕೆರೆ ಏರಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಯಂತ್ರಣ ವಿಧಿಸುವುದು, ಅತಿವೇಗದ ವಾಹನಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಹಾಗೂ ರಸ್ತೆ ಅಗಲೀಕರಣ ಕಾಮಗಾರಿ ಶೀಘ್ರ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಗಂಭೀರ ಅಪಘಾತಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಸ್ಥಳೀಯರು ಎಚ್ಚರಿಸಿದ್ದಾರೆ.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

6 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

9 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

12 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

14 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

15 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

1 day ago