ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳ ಹಿನ್ನೆಲೆಯಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅರಳುಮಲ್ಲಿಗೆ ತಾಪಂ ಕ್ಷೇತ್ರದ ಚುನಾವಣಾ ಆಕಾಂಕ್ಷಿ ಕೃಷ್ಣಪ್ಪ ತಿಳಿಸಿದರು.
ತಾಲೂಕಿನ ಅರಳುಮಲ್ಲಿಗೆ ತಾಪಂ ಕ್ಷೇತ್ರದ ಬೆಂಬಲಿಗರೊಂದಿಗೆ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ತಾಪಂ ಮತ್ತು ಜಿಪಂ ಚುನಾವಣೆಗೆ ಸಂಬಂಧಿಸಿದ ಮೀಸಲಾತಿ ಪ್ರಕಟವಾಗಿದ್ದು, ಚುನಾವಣಾ ಸಿದ್ಧತೆಯ ಭಾಗವಾಗಿ ಪಕ್ಷ ಸಂಘಟನೆಯ ಕಾರ್ಯವನ್ನು ನಿರಂತರವಾಗಿ ಮುಂದುವರಿಸಲಾಗುವುದು ಎಂದರು.
ಈ ಹಿಂದೆ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ. ಬಿಜೆಪಿ-ಜೆಡಿಎಸ್ ಮೈತ್ರಿಕೂಟದಿಂದ ಸ್ಪರ್ಧಿಸಲು ಅವಕಾಶ ದೊರೆತರೆ ಜನರೊಂದಿಗೆ ಬೆರೆತು ಕೆಲಸ ಮಾಡುವ ವಿಶ್ವಾಸವಿದೆ. ಅರಳುಮಲ್ಲಿಗೆ ತಾಪಂ ಕ್ಷೇತ್ರಕ್ಕೆ ಪರಿಶಿಷ್ಟ ಜಾತಿ (ಎಸ್ಸಿ) ಮೀಸಲಾತಿ ಘೋಷಣೆಯಾಗಿದ್ದು, ಈ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡುವಂತೆ ಪಕ್ಷದ ಮುಖಂಡರಿಗೆ ಮನವಿ ಮಾಡಲಾಗುವುದು ಎಂದು ಹೇಳಿದರು.
ತಾಪಂ ಚುನಾವಣೆಯ ಸಿದ್ಧತೆಯ ಭಾಗವಾಗಿ ಕಾರ್ಯಕರ್ತರನ್ನು ಭೇಟಿ ಮಾಡಿ ಚರ್ಚಿಸಲಾಗುತ್ತಿದೆ. ಮುಂದಿನ ಹಂತದಲ್ಲಿ ಪಕ್ಷದ ಮುಖಂಡರನ್ನು ಭೇಟಿ ಮಾಡಿ ಬೆಂಬಲ ಮತ್ತು ಸಹಕಾರ ಕೋರಲಾಗುವುದು. ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ದೊರೆತರೆ ಕ್ಷೇತ್ರದ ಜನರಿಗೆ ಕುಡಿಯುವ ನೀರು, ಚರಂಡಿ ಹಾಗೂ ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕೃಷ್ಣಪ್ಪ ತಿಳಿಸಿದರು.
ಸಭೆಯಲ್ಲಿ ಅರಳುಮಲ್ಲಿಗೆ ತಾಪಂ ಕ್ಷೇತ್ರದ ಬೆಂಬಲಿಗರಾದ ಆಂಜಿನಪ್ಪ, ಚೇತನ್, ಬೈಲಪ್ಪ, ಯಲ್ಲಪ್ಪ, ಅಭಿಷೇಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಮನೆಯವರಿಗೆ ವಿಡಿಯೋ ಕಾಲ್ ಮಾಡಿದ ಬಳಿಕ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…
ದೊಡ್ಡಬಳ್ಳಾಪುರ: ರಸ್ತೆ ವಿಸ್ತರಣೆ ಕಾಮಗಾರಿ ವೇಳೆ ಮಣ್ಣಿನಡಿ ಹುದುಗಿಹೋಗುವ ಅಪಾಯದಲ್ಲಿದ್ದ ವಿಜಯನಗರ ಅರಸರ ಕಾಲದ ಆರು ಐತಿಹಾಸಿಕ ವೀರಗಲ್ಲುಗಳನ್ನು ಪುರಾತತ್ವ…
ದೊಡ್ಡಬಳ್ಳಾಪುರ: ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿರುವ ಬೆನ್ನಲ್ಲೇ, ಮಾರುಕಟ್ಟೆಯಲ್ಲಿ ಟೊಮೆಟೊ ದರ ಕುಸಿತವೂ ರೈತರನ್ನು ಕಂಗಾಲಾಗಿಸಿದೆ. ಬೆಳೆ…
ಮನೆಯವರೆಲ್ಲರೂ ಸಿನಿಮಾ ನೋಡಲು ತೆರಳಿದ್ದ ವೇಳೆ ಮನೆಗೆ ನುಗ್ಗಿ 130 ಗ್ರಾಂ ಚಿನ್ನ ಕಳವು ಮಾಡಿದ್ದ ಆರೋಪಿಯೊಬ್ಬ, ಮನೆ ಮಾಲೀಕನ…
ಡ್ರಗ್ಸ್ ಮುಕ್ತ ಭಾರತ, ವ್ಯಸನ ಮುಕ್ತ ಕರ್ನಾಟಕ........ ಹೀಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಘೋಷಿಸಿವೆ. ಇನ್ನು ಕೆಲವೇ ವರ್ಷಗಳಲ್ಲಿ…
ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…