oplus_0
ತಾಲೂಕಿನ ಅರಳುಮಲ್ಲಿಗೆ ಪಂಚಾಯಿತಿಯಲ್ಲಿ ಅಧ್ಯಕ್ಷರ ಚುನಾವಣೆ ನಡೆದಿದ್ದು ನೂತನ ಅಧ್ಯಕ್ಷರಾಗಿ ಮಂಗಳ ಗೌರಮ್ಮ ಕೃಷ್ಣಮೂರ್ತಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
18 ಸದಸ್ಯರ ಬಲ ಹೊಂದಿರುವ ಅರಳು ಮಲ್ಲಿಗೆ ಪಂಚಾಯಿತಿಯಲ್ಲಿ ಜೂನ್ 12ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, 11 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮಂಗಳ ಗೌರಮ್ಮ ಕೃಷ್ಣಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅರಳುಮಲ್ಲಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿದ್ದ ನಿರ್ಮಲಾ ಸಿದ್ದೇಗೌಡರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಕಾಂಗ್ರೆಸ್ ಬೆಂಬಲಿತ ಮಂಗಳಗೌರಮ್ಮ ಮಾತ್ರ ನಾಮಪತ್ರ ಸಲ್ಲಿಸಿದ್ದರು.
ಬೇರೆ ಸದಸ್ಯರು ನಾಮಪತ್ರ ಸಲ್ಲಿಸದ ಕಾರಣ ಮಂಗಳ ಗೌರಮ್ಮನವರು ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರಿಗೆ ಪುಷ್ಪಮಾಲೆ ನೀಡಿ ಸಿಹಿ ತಿನಿಸುವ ಮೂಲಕ ಸದಸ್ಯರು, ಕಾಂಗ್ರೆಸ್ ಮುಖಂಡರು ಶುಭ ಕೋರಿದರು. ಪಟಾಕಿ ಸಿಡಿಸುವ ಮೂಲಕ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು.
ನೂತನ ಅಧ್ಯಕ್ಷರಾದ ಮಂಗಳ ಗೌರಮ್ಮ ಮಾತನಾಡಿ, ಸರ್ವ ಸದಸ್ಯರು ಒಮ್ಮತದಿಂದ ನನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ , ನಾನು ಬಡ ಕುಟುಂಬದ ಹೆಣ್ಣು ಮಗಳು ನನಗೆ ಈ ಅವಕಾಶ ಸಿಕ್ಕಿರುವುದು ಭಾಗ್ಯವೆಂದೆ ಭಾವಿಸುತ್ತೇನೆ. ಗ್ರಾಮ ಪಂಚಾಯಿತಿ ಸದಸ್ಯರಾಗಿ ಸತತ ನಾಲ್ಕು ಬಾರಿ ಜಯಗಳಿಸಿದ್ದು ಇದೇ ಮೊದಲ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದೇನೆ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕೆಂಬ ಹಂಬಲವಿದೆ, ಸರ್ವ ಸದಸ್ಯರ ಸಲಹೆ ಸೂಚನೆಗಳನ್ನು ಪಡೆದು ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಪಂಚಾಯ್ತಿ ಉಪಾಧ್ಯಕ್ಷ ಡಿ.ಆರ್. ಧ್ರುವಕುಮಾರ್, ಮಾಜಿ ಅಧ್ಯಕ್ಷ ವೆಂಕಟೇಶ್, ಮುಖಂಡರಾದ ಕೆಂಪಣ್ಣ, ನಗರಸಭಾ ಸದಸ್ಯರಾದ ಚಂದ್ರ ಮೋಹನ್, ರಘು, ಮಂಜುನಾಥ್, ಭೀಮಣ್ಣ ಮುಂತಾದವರು ಹಾಜರಿದ್ದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…