ಕೋಲಾರ: ನಗರದಲ್ಲಿ ಮಂಗಳವಾರ ಸಂಜೆ ಸುರಿದ ಬಾರಿ ಮಳೆಗೆ ಕೋಲಾರ ಚಿಕ್ಕಬಳ್ಳಾಪುರ ಮುಖ್ಯರಸ್ತೆಯ ಅರಹಳ್ಳಿ ಗೇಟ್ ರೈಲ್ವೆ ಬ್ರಿಡ್ಜ್ ಬಳಿ ಮಳೆಯ ನೀರು ಹೊರಗಡೆ ಹೋಗದೇ ನಿಂತಿದ್ದರಿಂದಾಗಿ ಅ ಭಾಗದಲ್ಲಿ ಸಂಚರಿಸುವ ಸಾರ್ವಜನಿಕವರಿಗೆ ತೀವ್ರ ತೊಂದರೆ ಅನುಭವಿಸಬೇಕಾಯಿತು.
ಕೂಡಲೇ ಶಾಸಕ ಕೊತ್ತೂರು ಮಂಜುನಾಥ್ ನಗರಸಭೆಯ ಅಧಿಕಾರಿಗಳಿಗೆ ಸೂಚನೆ ನೀಡಿ ರೈಲ್ವೆ ಬ್ರಿಡ್ಜ್ ಬಳಿಯ ಮಳೆ ನೀರಿನ ಸಮಸ್ಯೆಯನ್ನು ತಾತ್ಕಾಲಿಕವಾಗಿ ಪರಿಹಾರ ಕಂಡುಕೊಳ್ಳುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು ಬುಧವಾರ ಬೆಳಗ್ಗೆ ಅಧಿಕಾರಿಗಳು ಪೈಪ್ ಗಳಿಗೆ ಅಡ್ಡಲಾಗಿದ್ದ ಕಸಕಡ್ಡಿ, ಪ್ಲಾಸ್ಟಿಕ್ ಕವರ್ ಮತ್ತು ಮಣ್ಣನ್ನು ಹೊರಹಾಕಿ ಮಳೆಯ ನೀರು ಸರಾಗವಾಗಿ ಹರಿಯುವ ವ್ಯವಸ್ಥೆಯನ್ನು ಮಾಡಿಸಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು ಪ್ರಸ್ತುತ ಮಳೆಗಾಲ ಪ್ರಾಂಭವಾಗಿದೆ ಮುಂದೆ ಇಂತಹ ಘಟನೆಗಳು ನಡೆಯದಂತೆ ಸೂಕ್ತ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು ಜೊತೆಗೆ ನಗರಸಭೆ ವ್ಯಾಪ್ತಿಯಲ್ಲಿನ ಚರಂಡಿಗಳಿಂದ ಸರಾಗವಾಗಿ ನೀರು ಹರಿಯಲು ಮುಚ್ಚಿರುವ ಚರಂಡಿಯ ಕಾಲುವೆಗಳನ್ನು ಸ್ವಚ್ಚಗೊಳಿಸಲು ಗಮನ ಹರಿಸುವಂತೆ ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು.
ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ…
ಕೋಲಾರ: ಶಾಸಕ ಕೊತ್ತೂರು ಮಂಜುನಾಥ್ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…
ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ. ವರ್ಷದಿಂದ ವರ್ಷಕ್ಕೆ ಏರುತ್ತಿರುವ…
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…