ಕೋಲಾರ: ತಾಲೂಕಿನ ಅರಾಭಿಕೊತ್ತನೂರು ಗ್ರಾಮ ಪಂಚಾಯತಿಯ ಅಧ್ಯಕ್ಷರು ಹಾಗೂ ಕೆಲವು ಸದಸ್ಯರು ನೂತನ ಗ್ರಾಪಂ ಕಟ್ಟಡದ ನಿರ್ಮಾಣಕ್ಕೆ ಶ್ರಮಿಸಿದ ಬಹುತೇಕ ಸದಸ್ಯರನ್ನು ವಿಶ್ವಾಸಕ್ಕೆ ತಗೆದುಕೊಳ್ಳುತ್ತಿಲ್ಲ ಎಂದು ಹಿರಿಯ ಸದಸ್ಯ ಅರಾಭಿಕೊತ್ತನೂರು ನಂಜುಂಡಗೌಡ ಅವರು ಶಾಸಕ ಕೊತ್ತೂರು ಮಂಜುನಾಥ್ ಮತ್ತು ಎಂಎಲ್ಸಿ ಅನಿಲ್ ಕುಮಾರ್ ಎದುರು ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆಯಿತು.
ತಾಲೂಕಿನ ಅರಾಭಿಕೊತ್ತನೂರು ಗ್ರಾಮದಲ್ಲಿ ಸೋಮವಾರ ನೂತನ ಗ್ರಾಮ ಪಂಚಾಯತಿ ಕಟ್ಟಡ ಉದ್ಘಾಟನೆಯ ಸಂದರ್ಭದಲ್ಲಿ ಸದಸ್ಯರು ಅಲ್ಲದವರು ವೇದಿಕೆಯ ಮುಂದಿನ ಸಾಲಿನಲ್ಲಿ ಇದ್ದಾರೆ ಗ್ರಾಪಂ ಸದಸ್ಯರಿಗೆ ಬೆಲೆ ಇಲ್ಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ಕಾರ್ಯಕ್ರಮದಿಂದ ಹೊರ ನಡೆದರು. ನಂತರ ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ವಕ್ಕಲೇರಿ ರಾಮು ಅವರು ನಂಜುಂಡಗೌಡರಿಗೆ ಪೋನ್ ಮೂಲಕ ಕರೆಸಿಕೊಂಡು ನೀವು ಹಿರಿಯ ಸದಸ್ಯರು ಕಾರ್ಯಕ್ರಮದಲ್ಲಿ ಇದ್ದು ಇತರರಿಗೆ ಮಾರ್ಗದರ್ಶನ ಮಾಡಬೇಕು ಅದು ಬಿಟ್ಟು ದೂರ ಇರಬಾರದು ಎಂದು ಕೊನೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಶಾಸಕರು ಭಾಷಣ ಮಾಡುವ ಸಂದರ್ಭದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಸದಸ್ಯರು ಪಟ್ಟ ಶ್ರಮವನ್ನು, ಪ್ರತಿ ಸದಸ್ಯರು ವಯಕ್ತಿಕವಾಗಿ 40 ಸಾವಿರ ಕೊಟ್ಟಿದ್ದೇವೆ, ಕಲ್ಯಾಣಿಗಳ ಅಭಿವೃದ್ಧಿ, ಹಾಗೂ ಗ್ರಾಮದಲ್ಲಿ ವೀರಗಲ್ಲುಗಳ ಸ್ಥಾಪನೆಯಿಂದ ಮೈಸೂರು ದಸರಾದಲ್ಲಿ ಭಾಗವಹಿಸಿದ್ದು ಸೇರಿದಂತೆ ಊರಿನ ಅಭಿವೃದ್ಧಿ ವಿಷಯದಲ್ಲಿ ಕೈಗೊಂಡಿದ್ದನ್ನು ತಿಳಿಸಿದರು ಇದಕ್ಕೆ ಶಾಸಕ ಮತ್ತು ಎಂಎಲ್ಸಿ ಅವರು ಮಾತನಾಡುವ ಸಂದರ್ಭದಲ್ಲಿ ಅವರನ್ನು ಅಭಿನಂದನೆ ಸಲ್ಲಿಸಿದರು
ಅರಾಭಿಕೊತ್ತನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಒಟ್ಟು 20 ಸದಸ್ಯ ಬಲವಿದ್ದು ಹಾಲಿ ಅಧ್ಯಕ್ಷರ ಕಾರ್ಯವೈಖರಿಯಿಂದ ಕೇವಲ 6 ಸದಸ್ಯರು ಅಷ್ಟೇ ಈ ಕಾರ್ಯಕ್ರಮಕ್ಕೆ ಬಂದಿದ್ದಾರೆ ಉಳಿದ 14 ಜನ ಸದಸ್ಯರು ಕಾರ್ಯಕ್ರಮಕ್ಕೆ ಗೈರುಹಾಜರಿಯಾಗಿದ್ದಾರೆ ಎಂದು ನಂಜುಂಡಗೌಡ ಕಾರ್ಯಕ್ರಮದ ನಂತರ ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…