ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2023-24 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಫಾರ್ಸಿ ಜನಾಂಗದವರಿಗೆ ಅರಿವು ವಿದ್ಯಾಭ್ಯಾಸ ಸಾಲ ಯೋಜನೆ ಅಡಿಯಲ್ಲಿ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(KEA,Via/ CET/NEET) ಮುಖಾಂತರ MBBS,BDS,Aayush, Bachelor Arch, Engineering, Veterinary ಹಾಗೂ Pharma Science ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತಿದೆ. CET/NEET ಮುಖೇನ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ”ಅರಿವು” ಯೋಜನೆ ಅಡಿಯಲ್ಲಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗಮದ ವೆಬ್ ಸೈಟ್ “http://kmdconline.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿದ ಪ್ರಿಂಟ್ ಔಟ್ ಪಡೆದು ಕ್ಯೂಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್. ಎಸ್. ಎಲ್.ಸಿ, ಪಿ.ಯು.ಸಿ, ಅಂಕಪಟ್ಟಿ ಆಧಾರ್ ಕಾರ್ಡ್,ಫೋಟೋ 05 (Parents and Student) ಸಿ.ಇ.ಟಿ ಹಾಲ್ ಟಿಕೆಟ್ ಪ್ರತಿಗಳು ಮತ್ತು ನೋಟರಿ ಮಾಡಿಸಿ50/- ರೂಗಳ ಚಾಪಾಕಾಗದದಲ್ಲಿ ಇಂಡೆಮ್ನಿಟಿ ಬಾಂಡ್ ಈ ಎಲ್ಲಾ ಅಗತ್ಯ ದಾಖಲಾತಿಗಳೊಂದಿಗೆ *ಜುಲೈ 10 ರೊಳಗೆ*, ನಂ1599, ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ವೈ.ಎನ್ ಬಿಲ್ಡಿಂಗ್, ಹೊಸ ಬಸ್ ಸ್ಟಾಂಡ್ ಹಿಂಭಾಗ ಯಲಹಂಕ ಬೀದಿ ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಈ ಕಚೇರಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ 080-27681786 ಅಥವಾ kmdcbrural@gmail.com ಇ-ಮೇಲ್, ಸಹಾಯವಾಣಿ ಸಂಖ್ಯೆ080-8277799990(24*7) ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.