ಅರಿವು ವಿದೇಶಿ (OVERSEAS) ವಿದ್ಯಾಭ್ಯಾಸ ಸಾಲ ಯೋಜನೆ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ(ನಿ), ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ವತಿಯಿಂದ 2023-24 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಹಾಗೂ ಪಾರ್ಸಿ ಜನಾಂಗದವರಿಗೆ ಅರಿವು ವಿದೇಶಿ (OVERSEAS) ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವಿದೇಶಿ (OVERSEAS) ಸಾಲ ಯೋಜನೆಯಡಿಯಲ್ಲಿ ವಿದೇಶದಲ್ಲಿ ವ್ಯಾಸಂಗ ಮಾಡಲು ಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಮತ್ತು ಮಾನ್ಯತೆ ಪಡೆದಿರುವ ಯಾವುದೇ ವಿದೇಶ ವಿಶ್ವವಿದ್ಯಾಲಯದಿಂದ ಭಾರತ ದೇಶದ ಪ್ರತಿಷ್ಟಿತ IIT’S, IIM’S, ISC ಸಂಸ್ಥೆಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ಮಾಡಬಯಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾಬ್ಯಾಸ (OVERSEAS EDUCATION) ಯೋಜನೆಯಡಿಯಲ್ಲಿ ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ನಿಗಮದ www.kmdconline.karnataka.gov.in ಮೂಲಕ ಆನ್‌ಲೈನ್‌ನಲ್ಲಿ 2023ರ ಜೂನ್ 13 ರಿಂದ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್‌ನಲ್ಲಿ ಭರ್ತಿ ಮಾಡಿದ ಕೊಡಲೇ ಅರ್ಜಿಯನ್ನು ಪ್ರಿಂಟ್‌ ಔಟ್ ಪಡೆದು ಕ್ಯೂಆರ್ ಕೋಡ್ ಹೊಂದಿದ ಆರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್.ಎಸ್.ಎಲ್‌.ಸಿ., ಪಿ.ಯು.ಸಿ. ಅಂಕಪಟ್ಟಿ, ಆಧಾರ್ ಕಾರ್ಡ್‌, ಫೋಟೋ 5, (Parents and Student) ಎಸ್.ಎಸ್.ಎಲ್.ಸಿ ವರ್ಗಾವಣೆ ಪತ್ರ, ಪ್ರಸ್ತುತ ಅಧ್ಯಯನದ ಪ್ರಮಾಣ ಪತ್ರ, ಕಾಲೇಜು ಶುಲ್ಕ ರಚನೆ, ಪಾಸ್ಪೋರ್ಟ್ ನಕಲು, ವೀಸಾ ನಕಲು, ಫಲಾನುಭವಿಯ ಪ್ರಮಾಣ ಪತ್ರ, ಫಲಾನುಭವಿ ಮತ್ತು ಜಮೀನದಾರರ ಜಂಟಿ ಪ್ರಮಾಣ ಪತ್ರ, ಪ್ರಾಮಿಸರಿ ನೋಟ್ ಜೊತೆಗೆ ಡಿ.ಪಿ ನೋಟ್ ಡೆಲಿವರಿ ಲೇಟರ್, ಮಾರಾಟ ಪತ್ರಗಳು ಮತ್ತು ತಾಯಿಯ ಪತ್ರ ಖಾತಾಸಾರ ಮತ್ತು ಖಾತಾ ಪ್ರಮಾಣ ಪತ್ರ ಅಥವಾ ರೂಪಾಂತರ ನಮೂನೆ 15ರಲ್ಲಿ ನಿಲ್ ಎನ್ನಂಬರೆನ್ಸ್ ಪ್ರಮಾಣ ಪತ್ರ ನವೀಕೃತ ತೆರಿಗೆ ಪಾವತಿಸಿದ ರಶೀದಿ, ಸೂಕ್ತ ಪ್ರಾಧಿಕಾರದಿಂದ ಮಾರ್ಗದರ್ಶನ ದರ ಜಿಲ್ಲಾ ವ್ಯವಸ್ಥಾಪಕರಿಂದ ಆಸ್ತಿಯ ಸ್ಥಳ ಪರೀಶೀಲನೆ ವರದಿ ಹಾಗೂ ನೋಂದಾಯಿತ ಮೌಲ್ಯ ಮಾಪಕರಿಂದ ಮೌಲ್ಯಮಾಪನ ವರದಿ ಈ ಎಲ್ಲಾ ದಾಖಲೆಗಳನ್ನು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ವ್ಯವಸ್ಥಾಪಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ನಂ.59, ವೈ.ಎನ್.ಬಿಲ್ಡಿಂಗ್, ಹೊಸ ಬಸ್ ಸ್ಟಾಂಡ್ ಹಿಂಭಾಗ, ಯಲಹಂಕ ಬೀದಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಈ ಕಛೇರಿಗೆ ಸಲ್ಲಿಸಲು ಸೂಚಿಸಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-27681786, ಇಮೇಲ್ kmdcbrural@gmail.com, ಸಹಾಯವಾಣಿ ಸಂಖ್ಯೆ: 8277799990(24*7) ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

1 hour ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

9 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

12 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

20 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

1 day ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

1 day ago