2023-24 ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ “CET/NEET ವೃತ್ತಿಪರ ಕೋರ್ಸ್‌ಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಾದ ಅಂದರೆ ವೈದ್ಯಕೀಯ (ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್), ದಂತ ವೈದ್ಯಕೀಯ (ಬಿ.ಡಿ.ಎಸ್, ಎಂ.ಡಿ.ಎಸ್), ಆಯುಷ್ (ಬಿ.ಆಯುಷ್, ಎಂ.ಆಯುಷ್), ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ (ಬಿ.ಇ/ಬಿ.ಟೆಕ್, ಎಂ.ಇ/ಎಂ.ಟಿಕ್), ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಮತ್ತು (ಬಿ.ಆರ್ಕ್, ಎಂ ಆರ್ಕ್), MBA, MCA, LLB, B.Sc in Horticulture, Agricultural Engineering, Dairy Technology, Forestry, Veterinary and Animal Technology, Fisheries, Sericulture, Home/Community Sciences, Food Nutrition and Dietetics, B.Pharma, M.Pharma, Pharma D and D Pharma ಇಂತಹ ಪದವಿ ಕೋರ್ಸ್‌ಗಳಲ್ಲಿ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅರಿವು ರಿನಿವಲ್ (Arivu Renewal) ಸಾಲದ ಯೋಜನೆಯಡಿ (ವಿದ್ಯಾಭ್ಯಾಸ ಸಾಲ) ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅಂದರೆ ಮುಸ್ಲಿಂ, ಕ್ರಿಶ್ಚಿಯನ್ ಜೈನ್, ಬೌದ್ಧರು, ಸಿಖ್, ಪಾರ್ಸಿ ಇವರುಗಳು ಈ ಹಿಂದಿನ ವರ್ಷದಲ್ಲಿ ಪಡೆದಿರುವ ಸಾಲದ ಮೊತ್ತದ ಶೇಕಡ 12 ರಷ್ಟನ್ನು ಪಾವತಿಸಿ ನಿಗಮದ ಈ ಕೆಳಕಂಡ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿದ್ದು, ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅರಿವು ವಿದ್ಯಾಭ್ಯಾಸ ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ವಿದ್ಯಾರ್ಥಿಗಳು ಯಾವುದೇ ರಿನಿವಲ್ ಮೊತ್ತವನ್ನು ಪಾವತಿಸುವ ಅಗತ್ಯವಿರುವುದಿಲ್ಲ ಹಾಗೂ ಸಲ್ಲಿಸಿದ ಅರ್ಜಿಯ ಹಾರ್ಡ್ ಕಾಪಿಗಳನ್ನು ಮತ್ತು ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಿರುವ Original New Indemnity, Bond, ಮತ್ತು ಇತರೆ ಮೂಲ ದಾಖಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕ ಕಛೇರಿಗೆ ಸಲ್ಲಿಸಬೇಕಾಗಿರುತ್ತದೆ ಮತ್ತು ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ನಿಗದಿಪಡಿಸಿರುವುದಿಲ್ಲ.
ಅರಿವು ರಿನಿವಲ್’ (Arivu Renewal) ಸಾಲದ ಯೋಜನೆಯ ಆನ್‌ಲೈನ್ ವೆಬ್‌ಪೇಜ್
Kmdconline.karnataka.gov.in ಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನ (ರಜಾ ದಿನವನ್ನು ಹೊರತುಪಡಿಸಿ)
ಸಂಪರ್ಕಿಸಬಹುದಾಗಿದೆ.
ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ಎ)
ನಂ-562110, ಬೆಂಗಳೂರು ಗ್ರಾಮಾಂತರ ಜಿಲ್ಲೆ.
ದೂರವಾಣಿ ಸಂಖ್ಯೆ 080-27681736
Gmail: kmdcbrural@gmail.com
ಸಹಾಯವಾಣಿ ಸಂಖ್ಯೆ 8277799990 ಗೆ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…