ಅರಿವು ಸಾಲ(ಶೈಕ್ಷಣಿಕ ಸಾಲ) ಯೋಜನೆಯಡಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

2023-24 ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ “CET/NEET ವೃತ್ತಿಪರ ಕೋರ್ಸ್‌ಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಾದ ಅಂದರೆ ವೈದ್ಯಕೀಯ (ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್), ದಂತ ವೈದ್ಯಕೀಯ (ಬಿ.ಡಿ.ಎಸ್, ಎಂ.ಡಿ.ಎಸ್), ಆಯುಷ್ (ಬಿ.ಆಯುಷ್‌, ಎಂ.ಆಯುಷ್), ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ (ಬಿ.ಇ/ಬಿ.ಟೆಕ್, ಎಂ.ಇ/ಎಂ.ಟಿಕ್), ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ ಮತ್ತು (ಬಿ.ಆರ್ಕ್, ಎಂ ಆರ್ಕ್), MBA, MCA, LLB, B.Sc in Horticulture, Agricultural Engineering, Dairy Technology, Forestry, Veterinary and Animal Technology, Fisheries, Sericulture, Home/Community Sciences, Food Nutrition and Dietetics, B.Pharma, M.Pharma, Pharma D and D Pharma ಇಂತಹ ಪದವಿ ಕೋರ್ಸ್‌ಗಳಲ್ಲಿ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅರಿವು ರಿನಿವಲ್ (Arivu Renewal) ಸಾಲದ ಯೋಜನೆಯಡಿ (ವಿದ್ಯಾಭ್ಯಾಸ ಸಾಲ) ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅಂದರೆ ಮುಸ್ಲಿಂ, ಕ್ರಿಶ್ಚಿಯನ್ ಜೈನ್, ಬೌದ್ಧರು, ಸಿಖ್, ಪಾರ್ಸಿ ಇವರುಗಳು ಈ ಹಿಂದಿನ ವರ್ಷದಲ್ಲಿ ಪಡೆದಿರುವ ಸಾಲದ ಮೊತ್ತದ ಶೇಕಡ 12 ರಷ್ಟನ್ನು ಪಾವತಿಸಿ ನಿಗಮದ ಈ ಕೆಳಕಂಡ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಈ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿದ್ದು, ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಅರಿವು ವಿದ್ಯಾಭ್ಯಾಸ ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ವಿದ್ಯಾರ್ಥಿಗಳು ಯಾವುದೇ ರಿನಿವಲ್ ಮೊತ್ತವನ್ನು ಪಾವತಿಸುವ ಅಗತ್ಯವಿರುವುದಿಲ್ಲ ಹಾಗೂ ಸಲ್ಲಿಸಿದ ಅರ್ಜಿಯ ಹಾರ್ಡ್ ಕಾಪಿಗಳನ್ನು ಮತ್ತು ವೆಬ್‌ ಸೈಟ್‌ ನಲ್ಲಿ ಅಪ್ ಲೋಡ್ ಮಾಡಿರುವ Original New Indemnity, Bond, ಮತ್ತು ಇತರೆ ಮೂಲ ದಾಖಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕ ಕಛೇರಿಗೆ ಸಲ್ಲಿಸಬೇಕಾಗಿರುತ್ತದೆ ಮತ್ತು ಆನ್‌ಲೈನ್‌ ಮುಖಾಂತರ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ನಿಗದಿಪಡಿಸಿರುವುದಿಲ್ಲ.

ಅರಿವು ರಿನಿವಲ್‌’ (Arivu Renewal) ಸಾಲದ ಯೋಜನೆಯ ಆನ್‌ಲೈನ್ ವೆಬ್‌ಪೇಜ್
Kmdconline.karnataka.gov.in ಗೆ ಭೇಟಿ ನೀಡಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನ (ರಜಾ ದಿನವನ್ನು ಹೊರತುಪಡಿಸಿ)
ಸಂಪರ್ಕಿಸಬಹುದಾಗಿದೆ.

ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ಎ)
ನಂ-562110, ಬೆಂಗಳೂರು ಗ್ರಾಮಾಂತರ ಜಿಲ್ಲೆ.
ದೂರವಾಣಿ ಸಂಖ್ಯೆ 080-27681736
Gmail: kmdcbrural@gmail.com
ಸಹಾಯವಾಣಿ ಸಂಖ್ಯೆ 8277799990 ಗೆ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

3 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

7 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

8 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

9 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

11 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

14 hours ago