ಇಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಹಾಗೂ ಕೆರೆಗೆ ಸಂಬಂಧಪಟ್ಟ ವಿವಿಧ ಇಲಾಖಾಧಿಕಾರಿಗಳು, ಶಾಸಕ ಧೀರಜ್ ಮುನಿರಾಜ್, ತಹಶೀಲ್ದಾರ್ ಮೋಹನ ಕುಮಾರಿ ಸೇರಿದಂತೆ ಇತರರು ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಭೇಟಿ ನೀಡಿ ಕೆರೆಗಳ ಸ್ಥಿತಿಗತಿ ಪರಿಶೀಲನೆ ನಡೆಸಿದರು.
ದೊಡ್ಡತುಮಕೂರು ಹಾಗೂ ಮಜರಾಹೊಸಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಒದಗಿಸುವಂತೆ ಒತ್ತಾಯಿಸಿ ಹಾಗೂ ಕಲುಷಿತಗೊಂಡಿರುವ ಕೆರೆಗಳ ಶುದ್ಧೀಕರಣಕ್ಕೆ ಆಗ್ರಹಿಸಿ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ಹೋರಾಟ ವೇದಿಕೆ ಮುಖಂಡರು ಹಲವು ಹೋರಾಟ, ಉಪವಾಸ ಸತ್ಯಾಗ್ರಹವನ್ನು ಪಟ್ಟು ಬಿಡದೇ ನಡೆಸುತ್ತಿದ್ದಾರೆ.
ಈ ಹಿನ್ನೆಲೆ ಕರೆಗಳ ಸಮಸ್ಯೆಗಳನ್ನು ಹಾಗೂ ನಗರದ ಕೊಳಚೆ ನೀರಿನ ಶುದ್ಧೀಕರಣ ಘಟಕ ಸರಿಪಡಿಸುವ ಸಲುವಾಗಿ ಆಗಬೇಕಿರುವ ಸುಸ್ಥಿರ ಅಭಿವೃದ್ಧಿಯ ಕುರಿತು ಪರಿಶೀಲಿಸಿದರು.
ಈ ವೇಳೆ ಜಿಲ್ಲಾಧಿಕಾರಿಗೆ ಕೆರೆಗಳ ವಸ್ತುಸ್ಥಿತಿ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ಗ್ರಾಮಸ್ಥರು. ಹಂತ ಹಂತವಾಗಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್.