ಅರ್ಕಾವತಿ ನದಿಪಾತ್ರದ ಕೆರೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

ಇಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಹಾಗೂ ಕೆರೆಗೆ ಸಂಬಂಧಪಟ್ಟ ವಿವಿಧ ಇಲಾಖಾಧಿಕಾರಿಗಳು, ಶಾಸಕ ಧೀರಜ್‌ ಮುನಿರಾಜ್, ತಹಶೀಲ್ದಾರ್ ಮೋಹನ ಕುಮಾರಿ‌ ಸೇರಿದಂತೆ ಇತರರು ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಭೇಟಿ ನೀಡಿ ಕೆರೆಗಳ ಸ್ಥಿತಿಗತಿ ಪರಿಶೀಲನೆ ನಡೆಸಿದರು.

ದೊಡ್ಡತುಮಕೂರು ಹಾಗೂ ಮಜರಾಹೊಸಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಒದಗಿಸುವಂತೆ ಒತ್ತಾಯಿಸಿ ಹಾಗೂ ಕಲುಷಿತಗೊಂಡಿರುವ ಕೆರೆಗಳ ಶುದ್ಧೀಕರಣಕ್ಕೆ ಆಗ್ರಹಿಸಿ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ಹೋರಾಟ ವೇದಿಕೆ ಮುಖಂಡರು ಹಲವು ಹೋರಾಟ, ಉಪವಾಸ ಸತ್ಯಾಗ್ರಹವನ್ನು ಪಟ್ಟು ಬಿಡದೇ ನಡೆಸುತ್ತಿದ್ದಾರೆ.

ಈ ಹಿನ್ನೆಲೆ ಕರೆಗಳ ಸಮಸ್ಯೆಗಳನ್ನು ಹಾಗೂ ನಗರದ ಕೊಳಚೆ ನೀರಿನ ಶುದ್ಧೀಕರಣ ಘಟಕ ಸರಿಪಡಿಸುವ ಸಲುವಾಗಿ ಆಗಬೇಕಿರುವ ಸುಸ್ಥಿರ ಅಭಿವೃದ್ಧಿಯ ಕುರಿತು ಪರಿಶೀಲಿಸಿದರು.

ಈ ವೇಳೆ ಜಿಲ್ಲಾಧಿಕಾರಿಗೆ ಕೆರೆಗಳ ವಸ್ತು‌ಸ್ಥಿತಿ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟ ಗ್ರಾಮಸ್ಥರು. ಹಂತ ಹಂತವಾಗಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್.

Ramesh Babu

Journalist

Recent Posts

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

1 hour ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

3 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

15 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

16 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

16 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

23 hours ago