ಅರ್ಕಾವತಿ ನದಿ ಪಾತ್ರದ ಕೆರೆಗಳು ಕಲುಷಿತ: ಮುಂದುವರಿದ ಕೆರೆಗಳಲ್ಲಿನ ಮೀನುಗಳ ಮಾರಣಹೋಮ: ಯಾರೋ ಮಾಡುವ ತಪ್ಪಿಗೆ ಯಾರೋ ಬಲಿ..!

 

ಅರ್ಕಾವತಿ ನದಿ ಪಾತ್ರದ ಕೆರೆಗಳಾದ ದೊಡ್ಡತುಮಕೂರು ಕೆರೆ, ಚಿಕ್ಕತುಮಕೂರು ಕೆರೆಗಳು ಕಲುಷಿತಗೊಂಡಿದ್ದು, ನಿರಂತರವಾಗಿ ಸಾವನ್ನಪ್ಪುತ್ತಿರುವ ಕೆರೆಗಳಲ್ಲಿನ ಮೀನುಗಳು. ಇದಕ್ಕೆಲ್ಲಾ ಕಾರಣ ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಒಳ ಚರಂಡಿ ನೀರು, ಕಾರ್ಖಾನೆಗಳ ರಾಸಾಯನಿಕ ಯುಕ್ತ ತ್ಯಾಜ್ಯ ನೀರು ನೇರವಾಗಿ ಈ ಕೆರೆಗಳ ಒಡಲು ಸೇರುವುದರಿಂದ ಇಂತಹ ಘಟನೆ ಮರುಕಳಿಸುತ್ತಿದೆ ಎಂದು ಕೆರೆ ಹೋರಾಟ ಸಮಿತಿ ದೂರಿದೆ.

ಕೆರೆಗಳ ಸಂರಕ್ಷಣೆಗೆ, ಕೆರೆ ಕಲುಷಿತಕ್ಕೆ ಕಾರಣವಾಗುತ್ತಿರುವವರ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಅರ್ಕಾವತಿ ಕೆರೆ ಹೋರಾಟ ಸಮಿತಿ ಎಷ್ಟೇ ಬಾರಿ ಹೋರಾಟ, ಧರಣಿ, ಪ್ರತಿಭಟನೆ, ಸಂಬಂಧಿಸಿದ ಇಲಾಖೆಗಳಿಗೆ ದೂರು ನೀಡಿದರು ಇನ್ನೂ ಶಾಶ್ವತ ಪರಿಹಾರ ಸಿಕ್ಕಿಲ್ಲ. ಬದಲಿಗೆ ಜಲಚರ ಪ್ರಾಣಿಗಳ ಸಾವು ಮುಂದುವರಿಯುತ್ತಲೇ ಇದೆ. ಇಷ್ಟೆಲ್ಲಾ ಆದರೂ ಎಚ್ಚೆತ್ತುಕೊಳ್ಳದ ಸಂಬಂಧಪಟ್ಟ ಇಲಾಖಾಧಿಕಾರಿಗಳು, ಜನಪ್ರತಿನಿಧಿಗಳು.

ಮೀನುಗಳು‌ ಸತ್ತಾಗ ಮಾತ್ರ ಸ್ಥಳಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಭೇಟಿ ಕೊಟ್ಟು ಸ್ಯಾಂಪಲ್ ತೆಗೆದುಕೊಂಡು ಹೋಗಿ ವರದಿ ಕೊಡುತ್ತದೆಷ್ಟೇ, ಕಾರ್ಖಾನೆಗಳ ವಿರುದ್ಧ ಕ್ರಮ ಜರುಗಿಸುವುದಿಲ್ಲ ಎಂದು ಗ್ರಾಮಸ್ಥರ ಆಕ್ರೋಶ.

ಗ್ರಾಮಸ್ಥರಿಗೆ ಕುಡಿಯಲು ನೀರು ಸಹ ಇಲ್ಲ, ಇತ್ತೀಚಿಗೆ ಜಕ್ಕಲಮಡುಗು ಜಲಾಶಯದಿಂದ ಶುದ್ಧೀಕರಿಸಿದ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಕೆರೆ ನೀರನ್ನು ಬಳಸಿದರೆ ಏನಾದರೂ ಆಗಬಹುದು ಎಂಬ ಜೀವ ಭವಯದಲ್ಲಿ ಜೀವನ ನಡೆಸುತ್ತಿರುವ ಗ್ರಾಮಸ್ಥರು.

ಕೆರೆಗಳ ಉಳಿವಿಗಾಗಿ,‌ ಕೆರೆಗಳ ಶುದ್ಧೀಕರಣಕ್ಕಾಗಿ ಅವಿರತ ಹೋರಾಟ ನಡೆಸುತ್ತಿರುವ ಅರ್ಕಾವತಿ ಕೆರೆ ಹೋರಾ ಸಮಿತಿ ಹಾಗೂ ಗ್ರಾಮಸ್ಥರು, ಪರಿಸರಾಸ್ತಕರು. ಇದಕ್ಕೆ ವ್ಯತಿರಿಕ್ತವಾಗಿ ಇದಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ‌ ಎನ್ನುವ ಮನೋಭಾವದಿಂದ ಇರುವ ಸಂಬಂಧಪಟ್ಟ ಇಲಾಖೆಗಳು, ಜನಪ್ರತಿನಿಧಿಗಳು.

ಒಟ್ಟಾರೆ ಯಾರೋ ಮಾಡುತ್ತಿರುವ ತಪ್ಪಿಗೆ ಮೂಕ‌ ಪ್ರಾಣಿಗಳು ಜೀವ ಕಳೆದುಕೊಳ್ಳುತ್ತಿವೆ, ರೋಗಪೀಡತರಾಗುತ್ತಿರುವ ಮುಗ್ದ ಜನರು. ಭಾರೀ ಅನಾಹುತ ಸಂಭವಿಸುವುದಕ್ಕು ಮುನ್ನಾ ಕೆರೆಗಳ ಸಂರಕ್ಷಣೆ ಆಗಬೇಕಿದೆ.

Ramesh Babu

Journalist

Recent Posts

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

45 minutes ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

1 hour ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

4 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

7 hours ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

19 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

20 hours ago